Saturday 5th, July 2025
canara news

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

Published On : 15 Nov 2017   |  Reported By : Canaranews network


ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಆರಂಭವಾಗಿದೆ. ಶ್ರೀ ಕ್ಷೇತ್ರ ಸೇರಿದಂತೆ ಸುತ್ತಮುತ್ತಲ ಪರಿಸರವೆಲ್ಲ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಮಂಜುನಾಥನಿಗೆ ಅತಿ ಪ್ರಿಯವಾದ ಈ ದೀಪೋತ್ಸವಕ್ಕೆ ಹಿಂದೆ ಮಂಜುನಾಥನ ಸನ್ನಿದಿಯ ಸುತ್ತಲೂ ಒಂದು ಲಕ್ಷ ಹಣತೆಗಳನ್ನು ಉರಿಸುತ್ತಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗಿದೆ.ಕಾರ್ತಿಕ ಮಾಸದಂದು ಈ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಮಂಜುನಾಥ ಸ್ವಾಮಿ ಈ ಸಂದರ್ಭದಲ್ಲಿ ಕ್ಷೇತ್ರದಿಂದ ಹೊರಗೆ ಸಂಚರಿಸುತ್ತಾನೆ. ವಿವಿಧ ಪ್ರದೇಶಗಳಿಗೆ ಮಂಜುನಾಥನ ಮೂರ್ತಿಯೊಂದಿಗೆ ಮೆರವಣಿಗೆ ಸಾಗಿ ಪ್ರಮುಖ ಐದು ಕಟ್ಟೆಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ದೀಪೋತ್ಸವದ ಪ್ರಯುಕ್ತ ಬೆಳ್ಳಿಯ ಬ್ರಹ್ಮರಥೋತ್ಸವವೂ ನಡೆಯಲಿದೆ. ದೇಶ ವಿದೇಶದಿಂದ ಆಗಮಿಸಿದ ಲಕ್ಷಾಂತರ ಮಂದಿ ಭಕ್ತರು ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here