Friday 3rd, May 2024
canara news

ಕಾರು ಡಿಕ್ಕಿ- ಮಹಿಳೆ ಸಾವು

Published On : 19 Nov 2017   |  Reported By : Canaranews network


ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಳ್ಳಾಲ ಕುಂಪಲ ಬೈಪಾಸ್ ಬಳಿ ನಡೆದಿದೆ.

ವಿದ್ಯಾನಗರ ನಿವಾಸಿ ಸುಧೀರ್ ಎಂಬವರ ಪತ್ನಿ 31ರ ಹರೆಯದ ನಿಷಾ ಮೃತ ಮಹಿಳೆ. ನಿಷಾ ಮಂಗಳೂರಿನ ಹಾರ್ಡ್ ವೆರ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಕೇರಳದಿಂದ ಮಂಗಳೂರು ಕಡೆಗೆ ವೇಗವಾಗಿ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here