Saturday 10th, May 2025
canara news

ಕೋಳಿ ಅಂಕ ಅಡ್ಡೆ ಮೇಲೆ ಪೊಲೀಸರ ದಾಳಿ

Published On : 19 Nov 2017


ಮಂಗಳೂರು: ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ 39 ಅಂಕದ ಹುಂಜಗಳನ್ನು ವಶಪಡಿಸಿಕೊಂಡ ಘಟನೆ ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಜೂಜುಕೋರರನ್ನು ಪೊಲೀಸರು ಬಂಧಿಸಿದ್ದಾರ.ಮಂಗಳೂರು ಹೊರವಲಯದ ಬಜ್ಪೆ ಸಮೀಪದ ನೆರ್ಲಪದವು ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಜ್ಪೆ ಠಾಣೆಯ ಪೊಲೀಸರು ದಾಳಿ ನಡೆಸಿದರು.

ದಾಳಿ ವೇಳೆ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಮತ್ತು ನೂರಾರು ಜನರೂ ಸ್ಥಳದಲ್ಲಿ ಸೇರಿದ್ದರು.ಪೊಲೀಸರನ್ನು ಕಂಡ ಕೂಡಲೇ ಜನರು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಕೋಳಿ ಅಂಕ ನಡೆಸುತ್ತಿದ್ದ 6 ಮಂದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ದಾಳಿ ಸಂದರ್ಭದಲ್ಲಿ 39 ಅಂಕದ ಹುಂಜಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here