ಮುಂಬಯಿ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ಬೆಳಗ್ಗಿನ ಜಾವ ಲಕ್ಷ ದೀಪೋತ್ಸವ ವೈಭವಪೂರ್ಣವಾಗಿ ನಡೆಯಿತು. ನಾಡಿನೆಲ್ಲೆಡೆಯಿಂದ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳು ಶ್ರದ್ಧಾ-ಭಕ್ತಿಯಿಂದ ದೀಪೋತ್ಸವ ನೋಡಿ ಧನ್ಯತೆಯನ್ನು ಹೊಂದಿದರು. ಶನಿವಾರರಾತ್ರಿ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನ ಗೊಂಡವು.