ಮಂಗಳೂರು : ಆಟೋ ರಿಕ್ಷಾಕ್ಕೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ದ.ಕ.ಜಿಲ್ಲೆಯ ಉಪ್ಪಿನಂಗಡಿಯ ಬಾರ್ಯ ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ.
ಮೃತ ಬಾಲಕ ಮುದ್ದಡ್ಕ ಮದೀನತುಲ್ ಮುನವ್ವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆ ಜಿ ಓದುತ್ತಿದ್ದ. ಮಹಮ್ಮದ್ ಸನದ್ ಮೃತಪಟ್ಟ ಬಾಲಕ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.