Saturday 10th, May 2025
canara news

ಸೌದಿಯಲ್ಲಿ ಗೃಹ ಬಂಧನದಲ್ಲಿರುವ ಮಹಿಳೆಯ ರಕ್ಷಣೆಗೆ ಮುಂದಾದ ಎಸ್ ಡಿಪಿಐ

Published On : 23 Nov 2017   |  Reported By : canaranews network


ಮಂಗಳೂರು: ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ ಮಂಗಳೂರಿನ ವಾಮಂಜೂರಿನ ಮಹಿಳೆಯೋರ್ವರು ಸಂಕಷ್ಟಕ್ಕೆ ಸಿಲುಕಿದ್ದು, ದಕ್ಷಿಣ ಕನ್ನಡ ಜಿಲ್ಲಾ ಎಸ್ಡಿಪಿಐ ಸಂಘಟನೆಯು ಸೌದಿಯಲ್ಲಿರುವ ತನ್ನ ಯುವಕರ ಸಂಘಟನೆಯ ಮೂಲಕ ಈ ಮಹಿಳೆಯನ್ನು ಪತ್ತೆಹಚ್ಚಿ ರಕ್ಷಿಸಲು ಮುಂದಾಗಿದೆ. ವಾಮಂಜೂರಿನ ಕೆಲರಾಯ್ಕೋಡಿ 2ನೇ ಬ್ಲಾಕ್ನ ಬಾಲಪ್ಪ ಬಾಲಕೃಷ್ಣ (55) ಅವರ ಪತ್ನಿ ವಿಜಯಾ (43) ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಹಿಳೆ. ವಿಜಯಾ ಅವರ ಪತಿ ಬಾಲಕೃಷ್ಣ ಅವರು ಅನಾರೋಗ್ಯ ಪೀಡಿತರಾಗಿದ್ದು, ಮಗ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು,

ತೀರಾ ಬಡ ಕುಟುಂಬಕ್ಕೆ ವಿಜಯಾ ಅವರೇ ಆಧಾರಸ್ತಂಭವಾಗಿದ್ದರು. ಹಾಗಾಗಿ 2015ರ ಜು. 15ರಂದು ಬಜಪೆಯ ಮಹಿಳೆಯೋರ್ವರ ಪರಿಚಯದ ಮೂಲಕ ಸೌದಿ ಅರೇಬಿಯಾಕ್ಕೆ ಮನೆಕೆಲಸದ ಉದ್ಯೋಗಕ್ಕೆಂದು ಅವರು ತೆರಳಿದ್ದರು. ಕೆಲವು ತಿಂಗಳು ಮಾತ್ರ ಫೋನ್ ಸಂಪರ್ಕದಲ್ಲಿದ್ದ ವಿಜಯಾ ಅನಂತರದ ದಿನಗಳಲ್ಲಿ ಅಪರೂಪಕ್ಕೊಮ್ಮೆ ಮಾತ್ರ ಸಂಪರ್ಕಕ್ಕೆ ಸಿಗುತ್ತಿದ್ದರು. ಯಾವಾಗಲಾದರೊಮ್ಮೆ ಹಣ ಕಳುಹಿಸಿ ಕೊಡುತ್ತಿದ್ದರು.

ಎರಡು ವರ್ಷಗಳ ಬಳಿಕ ಪತಿಗೆ ವಿಪರೀತ ಅನಾರೋಗ್ಯದ ಕಾರಣ ಊರಿಗೆ ಮರಳಲು ಬಯಸಿದ ವಿಜಯಾ ಅವರಿಗೆ ಸೌದಿ ಪ್ರಾಯೋಜಕರು ಸ್ಪಂದನೆ ನೀಡಿಲ್ಲ. ಬಾಲಕೃಷ್ಣ ಅವರು ಊರಿನ ಪರಿಚಯದವರಿಗೆ ಈ ವಿಚಾರವನ್ನು ತಿಳಿಸಿದ್ದರು. ಮಾಹಿತಿ ಪಡೆದ ಎಸ್ಡಿಪಿಐ ಪಕ್ಷದ ರಿಯಾಜ್ ಫರಂಗಿಪೇಟೆ ಅವರು ಸೌದಿ ಅರೇಬಿಯಾದಲ್ಲಿರುವ ಕರಾವಳಿಯ ಯುವಕರಿಗೆ ಮಾಹಿತಿ ನೀಡಿದ್ದು, ಅನಿವಾಸಿ ಭಾರತೀಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಇಂಡಿಯನ್ ಸೋಶಿಯಲ್ ಫೋರಮ್ (ಐ.ಎಸ್.ಎಫ್.) ವಿಜಯಾ ಪ್ರಕರಣವನ್ನು ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿತ್ತು. ವಿಜಯಾ ಅವರನ್ನು ಪತ್ತೆ ಮಾಡಿದ ಐ.ಎಸ್.ಎಫ್. ಸಂಘಟನೆಯು ಸೌದಿ ಕಾರ್ಮಿಕ ನ್ಯಾಯಾಲಯದಲ್ಲಿ ದೂರನ್ನೂ ದಾಖಲಿಸಿತು.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಪತ್ರಗಳನ್ನು ರಿಯಾಜ್ ಅವರು ಐ.ಎಸ್.ಎಫ್.ಗೆ ತಲುಪಿಸಿದ್ದು, ಶೀಘ್ರದಲ್ಲೇ ವಿಜಯಾ ಅವರು ತವರಿಗೆ ಮರಳುವಂತಾಗಬಹುದು ಎಂಬ ವಿಶ್ವಾಸವನ್ನು ಐ.ಎಸ್.ಎಫ್ ಫೋರಂ ವ್ಯಕ್ತಪಡಿಸಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here