Monday 29th, April 2024
canara news

ಮಂಗಳೂರಿನ ಮೆಡಿಕಲ್ನಲ್ಲಿ ಮಾದಕ ಔಷಧ ಮಾರಾಟ – ಪೊಲೀಸರ ದಾಳಿ

Published On : 25 Nov 2017   |  Reported By : Canaranews network


ಮಂಗಳೂರು: ರೌಡಿ ನಿಗ್ರಹ ದಳದ ಪೊಲೀಸರು ಮತ್ತು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಶನಿವಾರ ಬೆಳ್ಳಂಬೆಳಿಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಮೆಡಿಕಲ್ ಸ್ಟೋರ್ಸ್ನಲ್ಲಿ ಮಾದಕ ಔಷಧ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಮೆಡಿಕಲ್ ಮಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.

ಮಂಗಳೂರಿನ ಯೆಯ್ಯಾಡಿ ಜಂಕ್ಷನ್ನಲ್ಲಿರುವ ಪ್ರಜ್ವಲ್ ಮೆಡಿಕಲ್ಸ್ನಲ್ಲಿ ಕಾನೂನು ಬಾಹಿರವಾಗಿ , ವೈದ್ಯರ ಸಲಹಾ ಚೀಟಿ ಇಲ್ಲದೇ ನ್ಯೂಟ್ರೋಸನ್ ಎನ್ನುವ ಮಾದಕ ಔಷದವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ.

ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಹಾಗೂ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಾದಕ ಔಷಧವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಮೆಡಿಕಲ್ ಸ್ಟೋರ್ ಮಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here