Saturday 10th, May 2025
canara news

ಚಪ್ಪಲಿಯಲ್ಲಿ 24 ಲಕ್ಷ ಮೌಲ್ಯದ ಚಿನ್ನ ಸಾಗಾಟ ಯತ್ನ;ಓರ್ವ ವಶಕ್ಕೆ

Published On : 28 Nov 2017   |  Reported By : canaranews network


ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟ ಪತ್ತೆ ಹಚ್ಚಿದ್ದಾರೆ. ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವನ ವರ್ತನೆಯಿಂದ ಕಸ್ಟಮ್ಸ್ ಅಧಿಕಾರಿಗಳು ಸಂಶಯಗೊಂಡು, ತಕ್ಷಣ ಆತನನ್ನು ತನಿಖೆಗೆ ಒಳಪಡಿಸಿದಾಗ ಈ ಅಕ್ರಮ ಚಿನ್ನ ಸಾಗಾಟ ಬಯಲಾಗಿದೆ.ಕಾಸರಗೋಡು ನಿವಾಸಿ ಅಹ್ಮದ್ ತಾಹೀರ್ ದುಬೈಯಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ IX814 ವಿಮಾನ ಮೂಲಕ ಮಂಗಳೂರಿಗೆ ಬಂದಿಳಿದಿದ್ದ .

ತಾಹಿರ್ ವರ್ತನೆ ಬಗ್ಗೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತನಿಖೆಗೆ ಒಳಪಡಿಸಿದ್ದಾರೆ.ಈ ಸಂದರ್ಭದಲ್ಲಿ ತಾಹಿರ್ ಧರಿಸಿದ್ದ ಚಪ್ಪಲ್ ನಲ್ಲಿ ಅಡಗಿಸಿ ಚಿನ್ನ ಸಾಗಾಟ ಪ್ರಕರಣ ಪತ್ತೆಯಾಗಿದೆ. ಚಪ್ಪಲ್ ನ ಸೋಲ್ ನಲ್ಲಿ ತಾಹೀರ್ ಚಿನ್ನದ ಗಟ್ಟಿಗಳನ್ನು ಅಡಗಿಸಿಟ್ಟಿದ್ದ . ಚಪ್ಪಲ್ ನಲ್ಲಿ ಅಡಗಿಸಿ ಇಡಲಾಗಿದ್ದ 804 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 24 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಹಮ್ಮದ್ ತಾಹಿರ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗೆಳು ತನಿಖೆ ಮುಂದುವರೆಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here