Monday 29th, April 2024
canara news

ಸ್ಕೇಟಿಂಗ್ ಪಟುಗಳ ಹೊಡೆದಾಟ; ವಿಡಿಯೋ ವೈರಲ್

Published On : 30 Nov 2017   |  Reported By : canaranews network


ಮಂಗಳೂರು: ಮಂಗಳೂರಿನಲ್ಲಿ ಸ್ಕೇಟಿಂಗ್ ಪಟುಗಳಿಬ್ಬರು ಹೊಡೆದಾಡಿಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ನವೆಂಬರ್ 26 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ 33ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಇಬ್ಬರು ಸ್ಕೇಟಿಂಗ್ ಪಟುಗಳು ಸ್ಕೇಟಿಂಗ್ ರಿಂಕ್ ನಲ್ಲೇ ಹಿಗ್ಗಾಮುಗ್ಗ ಹೊಡೆದಾಡಿಕೊಂಡಿದ್ದಾರೆ.

ಮಂಗಳೂರಿನ ಹೊಯಿಗೆ ಬೈಲ್ ನಲ್ಲಿರುವ ಫ್ರಾನ್ಸಿಸ್ಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಹೈಫೈ ಸ್ಕೇಟಿಂಗ್ ಕ್ಲಬ್ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಡೆಯುತ್ತಿದ್ದ ವೇಳೆ ಈ ಹೊಡೆದಾಟ ನಡೆದಿದೆ.16 ವರ್ಷಕ್ಕಿಂತ ಮೇಲ್ಪಟ್ಟ ವಿಭಾಗದ ಫೈನಲ್ ಪಂದ್ಯ ನಡೆಯುತ್ತಿದ್ದು, ಬೆಂಗಳೂರಿನ ರಾಘವೇಂದ್ರ ಹಾಗೂ ಬೆಂಗಳೂರಿನ ಅಂಕಿತ್ ಎಂಬ ಸ್ಕೇಟರ್ ಗಳು ಫಿನಿಶ್ ಲೈನ್ ದಾಟುವ ಮೊದಲೇ ಉದ್ದೇಶ ಪೂರ್ವಕವಾಗಿಯೇ ಡಿಕ್ಕಿ ಹೊಡೆದು ಬಿದ್ದರು.

ಬಿದ್ದ ತಕ್ಷಣ ಸ್ಕೇಟಿಂಗ್ ಪಟು ರಾಘವೇಂದ್ರ ಇನ್ನೋರ್ವ ಸ್ಕೇಟಿಂಗ್ ಪಟು ಅಂಕಿತ್ ಗೆ ಹಿಗ್ಗಾಮುಗ್ಗ ಥಳಿಸಿದ್ದಾನೆ.ಈ ಸ್ಕೇಟಿಂಗ್ ಪಟುಗಳ ಹಲ್ಲೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here