Saturday 5th, July 2025
canara news

ಎರಡು ದ್ವಿಚಕ್ರ ವಾಹನದ ನಡುವೆ ಡಿಕ್ಕಿ - ವಿದ್ಯಾರ್ಥಿ ಸ್ಥಳದಲ್ಲೇ ಸಾವು

Published On : 03 Dec 2017   |  Reported By : Canaranews network


ಮಂಗಳೂರು: ೨ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದ.ಕ.ಜಿಲ್ಲೆಯ ಪುತ್ತೂರಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ವಿದ್ಯಾರ್ಥಿಯನ್ನು ಬರೆಪ್ಪಾಡಿ ಅನ್ಯಾಡಿ ಸುಲೈಮಾನ್ ರವರ ಪುತ್ರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮದ್ ಅನಾಜ್ ಎಂದು ಗುರುತಿಸಲಾಗಿದೆ.

ಅನಾಝ್ ರವರ ಮನೆಯಲ್ಲಿ ಶುಭ ಕಾರ್ಯಕ್ರಮವಿದ್ದು ಕ್ಯಾಮರಾ ತರಲೆಂದು ಸವಣೂರಿಗೆ ಬಂದಿದ್ದರು. ಸವಣೂರಿನಲ್ಲಿ ಕ್ಯಾಮರಾ ದೊರೆಯದಿರುವ ಹಿನ್ನೆಲೆಯಲ್ಲಿ ಅವರು ಬೈಕ್ ನಲ್ಲಿ ಪುತ್ತೂರಿಗೆ ಬಂದು ಕ್ಯಾಮರಾ ಪಡೆದುಕೊಂಡು ಮನೆಗೆ ಹಿಂತಿರುಗುತ್ತಿದ್ದರು.

ಈ ವೇಳೆ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಿಂದ ತೀವ್ರ ಗಾಯಗೊಂಡವರ ಪೈಕಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಮತ್ತೋರ್ವ ವಿದ್ಯಾರ್ಥಿ ಅಬ್ದುಲ್ ಆಸೀಪ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಬೈಕ್ ನಲ್ಲಿದ್ದ ಗಾಯಾಳು ವಿಶ್ವನಾಥ್ ಮತ್ತು ಅಶೋಕ್ ಎಂಬುವವರು ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here