Monday 29th, April 2024
canara news

ಬೆಳ್ತಂಗಡಿಯಲ್ಲಿ ಗ್ಯಾಂಗ್ ವಾರ್: ಮೂವರಿಗೆ ಗಂಭೀರ ಗಾಯ

Published On : 06 Dec 2017   |  Reported By : canaranews network


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ನಡೆದಿದೆ.ಮಸೀದಿ ವಿಚಾರದಲ್ಲಿ ಎರಡು ತಂಡಗಳ ನಡುವೆ ಮನಸ್ತಾಪದ ಹಿನ್ನೆಲೆಯಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ. ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಡಿ.04ರ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, 10 ಜನರ ತಂಡ 3 ಯುವಕರ ಮೇಲೆ ದಾಳಿ ನಡೆಸಿದೆ.

ಲಾಂಗು ಮಚ್ಚುಗಳಿಂದ ತಂಡ ದಾಳಿ ನಡೆಸಿದದ್ದು ಗೇರುಕಟ್ಟೆ ಬಸ್ ಸ್ಟಾಂಡ್ ಬಳಿ ಸಾರ್ವಜನಿಕರ ಎದುರೇ ಗ್ಯಾಂಗ್ ವಾರ್ ನಡೆದಿದೆ. ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಸ್ಲೀಂ,ಹಾರಿಸ್,ಶಿಹಾಬ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಯಾಕೂಬ್,ಉಮರಬ್ಬ, ರವೂಫ್,ಇರ್ಫಾನ್ ರಿಝ್ವಾನ್, ಅಬೂಬಕರ್, ಆದಂ ಶಾಫಿ ,ಹೈದರ್ ಎಂಬವರು ಈ ತಲವಾರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here