Sunday 28th, April 2024
canara news

ಓಖಿ' ಚಂಡಮಾರುತದಿಂದ ಮಂಗಳೂರಲ್ಲಿ ಕಡಲ್ಕೊರೆತ

Published On : 06 Dec 2017   |  Reported By : canaranews network   |  Pic On: Photo credit : The Hindu


ಮಂಗಳೂರು : ಓಖಿ ಚಂಡಮಾರುತದ ಪ್ರಭಾವ ರಾಜ್ಯದ ಕರಾವಳಿ ತೀರಕ್ಕೂ ತಟ್ಟಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲಿ ಅಬ್ಬರ ಜೋರಾಗಿದೆ. ಮಂಗಳೂರು ಹೊರವಲಯದ ಉಳ್ಳಾಲದ ತೀರ ಪ್ರದೇಶದಲ್ಲಿ ಕಡಲ ಅಬ್ಬರ ಹೆಚ್ಚಿದ್ದು ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತ್ತಿದೆ. ಕಳೆದ ರಾತ್ರಿ ಉಳ್ಳಾಲದ ರೆಸಾರ್ಟ್ ಗೂ ನೀರು ನುಗ್ಗಿದೆ.ಜಿಲ್ಲೆಯ ಮಂಜೇಶ್ವರದ ಕಡಪ್ಪರ, ಉಪ್ಪಳ ಬಳಿಯ ಕೊಯಿಪಾಡಿ ಎಂಬಲ್ಲಿ 6 ಮನೆಗಳು ಸಮುದ್ರದ ಪಾಲಾಗಿವೆ. ಅಲ್ಲಿದ್ದ ನಿವಾಸಿಗಳನ್ನು ಮೊದಲೇ ಸ್ಥಳಾಂತರ ಮಾಡಿದ್ದರಿಂದ ಜೀವ ಹಾನಿ ತಪ್ಪಿದೆ.

ಮಂಜೇಶ್ವರದ ಕಡಲ ಕಿನಾರೆಯಲ್ಲಿ ಮನೆಯೊಂದು ನೋಡ ನೋಡುತ್ತಿದ್ದಂತೆಯೇ ಸಮುದ್ರದ ಪಾಲಾಯಿತು. ಶನಿವಾರ ಸಂಜೆಯಿಂದಲೇ ಕಡಲ್ಕೊರೆತ ಆರಂಭವಾಗಿದೆ. ಇದರಿಂದಾಗಿ ಮನೆಗಳಿಗೆ ಹಾನಿಯಾಗಿದೆ.ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. 'ಓಖಿ' ಚಂಡಮಾರುತದ ಅಬ್ಬರದಿಂದಾಗಿ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ..ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here