Sunday 11th, May 2025
canara news

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1 ಕೋ.ರೂಪಾಯಿ ನಗದು ವಶಕ್ಕೆ

Published On : 09 Dec 2017   |  Reported By : Canaranews network


ಮಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.ಕಂಕನಾಡಿ ನಗರ ಠಾಣೆ ಪೊಲೀಸರು ಗಸ್ತಿನಲ್ಲಿರುವ ಸಂದರ್ಭದಲ್ಲಿ ಈ ಅಕ್ರಮ ಹಣ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ.ಪೊಲೀಸರು ಗಸ್ತಿನಲ್ಲಿರುವ ಸಂದರ್ಭದಲ್ಲಿ ಅಕ್ರಮ ಹಣ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು.

ಈ ಹಿನ್ನೆಲೆಯಲ್ಲಿ ಪಂಪ್ ವೆಲ್ ವೃತ್ತದ ಬಳಿ ಹುಂಡೈ ಐ20 ಕಾರನ್ನು ಅಡ್ಡಗಟ್ಟಿ, ತಪಾಸಣೆ ನಡೆಸಿದಾಗ ಈ ಅಕ್ರಮ ಹಣ ಸಾಗಾಣಿಕೆ ಪತ್ತೆಯಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ನಿವಾಸಿಗಳಾದ ತಾನಾಜಿ (54), ಅಮೂಲ್ ಮಾಲಿ(29), ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ದಿನೇಶ್ ಪ್ರಕಾಶ್ ಶಿಂಧೆ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಕೋಟಿ ರೂಪಾಯಿ ನಗದು, ಒಂದು ಕಾರು, ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here