Sunday 11th, May 2025
canara news

ಅನ್ಯಧರ್ಮದ ಯುವತಿಯೊಂದಿಗೆ ಸುತ್ತಾಟ, ಯುವಕನಿಗೆ ಗೂಸಾ

Published On : 14 Dec 2017   |  Reported By : canaranews network


ಮಂಗಳೂರು: ಯುವತಿಯೊಂದಿಗೆ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕನಿಗೆ ಧರ್ಮದೇಟು ನೀಡಿದ ಘಟನೆ ಬುಧವಾರ ನಡೆದಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿಯ ಬಸ್ ನಿಲ್ದಾಣದಲ್ಲಿ ಉಳ್ಳಾಲ ಮೂಲದ ನಿಸಾರ್ ಎಂಬಾತ ಆಕಾಶ ಭವನ ಮೂಲದ ಯುವತಿ ಜೊತೆಗೆ ಸರಸವಾಡುತ್ತಿದ್ದುದನ್ನು ಗಮನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಆತನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಜತೆಗೆ ಆತ ತಪ್ಪೊಪ್ಪಿಗೆ ಹೇಳಿಕೆ ನೀಡುವುದನ್ನು ಮೊಬೈಲಿನಲ್ಲಿ ಚಿತ್ರೀಕರಿಸಿದ್ದಾರೆ. ಸಂಘಟನೆ ಕಾರ್ಯಕರ್ತರು ಯುವಕನ ಬೆನ್ನು ಬೀಳುತ್ತಿದ್ದಂತೆ ಯುವತಿ ಪರಾರಿಯಾಗಿದ್ದಾಳೆ. ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿ ಮುಸ್ಲಿಂ ಆಗಿ ಮತಾಂತರಿಸುವ ಜಾಲ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಆಕ್ರೋಶಗೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ ಎನ್ನಲಾಗುತ್ತಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here