Friday 29th, March 2024
canara news

ಸಾವಿನಲ್ಲಿ ರಾಜಕಾರಣ ಮಾಡುವವರು ರಾಕ್ಷಸರು : ಪ್ರಕಾಶ್ ರೈ

Published On : 14 Dec 2017   |  Reported By : canaranews network


ಮಂಗಳೂರು: 'ರಾಜ್ಯದಲ್ಲಿ ಮತೀಯ ಗಲಭೆಗಳನ್ನು ಯಾರು ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಜನರು ಯಾರೂ ಮೂರ್ಖರಲ್ಲ. ಸಾವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವವರು ದೊಡ್ಡ ರಾಕ್ಷಸರು' ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಮಂಗಳವಾರ ಮಂಗಳೂರಿನ ಫರಂಗಿಪೇಟೆಯಿಂದ ಮಾಣಿವರೆಗೆ ನಡೆದ ಸಾಮರಸ್ಯ ನಡಿಗೆ ಪಾದಯಾತ್ರೆಯನ್ನು ಉದ್ದೇಶಿಸಿ ಅವರು ಮಾತನಾಡಿ ಸಂಘ ಪರಿವಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

'ಸಾವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಮನುಷ್ಯನನ್ನು ಕೊಲ್ಲುವ ಅರ್ಹತೆ ಯಾರಿಗೂ ಇಲ್ಲ. ದೇವರ ಹೆಸರನ್ನು ಹೇಳಿ ರಾಜಕೀಯ ಮಾಡುವವರನ್ನು ಎದುರಿಸಬೇಕಾಗಿದೆ ' ಎಂದು ಜನರಿಗೆ ಕರೆ ನೀಡಿದರು.ನಂತರ ಸಚಿವ ಬಿ ರಮಾನಾಥ ರೈ ಮಾತನಾಡಿ, 'ಕೆಲವು ತಿಂಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗಳು ನಡೆದಿವೆ. ಜಿಲ್ಲೆಯನ್ನು ಮತೀಯವಾದಿಗಳು ಪ್ರಯೋಗಾಲಯ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ' ಎಂದು ದೂರಿದರು. 'ಈ ಸಮಯದಲ್ಲಿ ಸಾಮರಸ್ಯ ನಡಿಗೆ ಬೇಕಿತ್ತೇ? ಎಂಬ ಮಾತುಗಳು ಕೇಳಿಬಂದಿತ್ತು.

ನಾವು ಕಾನೂನಿಗೆ ತಲೆ ಬಾಗಿಯೇ ಕೆಲಸ ಮಾಡುತ್ತೇವೆ ಹೊರತು ಕಾನೂನು ಉಲ್ಲಂಘಿಸಿಲ್ಲ. ಸಾಮರಸ್ಯ ಪಾದಯಾತ್ರೆ ದಿಢೀರ್ ನಿರ್ಧಾರವಲ್ಲ. ಪೂರ್ವಭಾವಿಯಾಗಿಯೇ ನಡೆಸಿದ ಯೋಜನೆ' ಎಂದು ಸ್ಪಷ್ಟಪಡಿಸಿದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here