Sunday 11th, May 2025
canara news

ನಾಳೆಯಿಂದ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲಾ ಸುವರ್ಣ ಮಹೋತ್ಸವ

Published On : 19 Dec 2017   |  Reported By : Bernard J Costa


ಕುಂದಾಪುರ: ಐದು ದಶಕಗಳ ಹಿಂದೆ ಕುಂದಾಪುರದ ಹೃದಯ ಭಾಗದಲ್ಲಿ ಜನ್ಮತಳೆದ ಸೈಂಟ್ ಮೇರಿಸ್ ಪ್ರೌಢಶಾಲೆಗೆ ಇದೀಗ ಸುವರ್ಣ ಮಹೋತ್ಸವದ ಸಂಭ್ರಮ. ಜನ ಮಾನಸದಲ್ಲಿ ಶೈಕ್ಷಣಿಕ, ಸಾಂಸ್ಕøತಿಕ, ಕ್ರೀಡಾ ರಂಗದಲ್ಲಿ ಗಟ್ಟಿಯಾಗಿ ಬೆಳೆದು ನಿಂತ ಸೈಂಟ್ ಮೇರಿಸ್ ಪ್ರೌಢಶಾಲೆ ಶಿಸ್ತಿಗೆ ಹೆಸರುವಾಸಿಯಾಗಿ ಗುರುತಿಸಿಕೊಂಡಿದೆ.

ಡಿ.21 ಮತ್ತು ಡಿ.22 ರಂದು ಅರಿವಿನ ಹೆಜ್ಜೆ ಗುರುತುಗಳನ್ನು ಮೂಡಿಸಿದ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಸಂಭ್ರಮದ ಕಾರ್ಯಕ್ರಮ ನಡೆಯಲಿದೆ. ಡಿ.21ರಂದು ಗುರುವಾರ ಏರು ಹೊತ್ತು 10 ಗಂಟೆಗೆ ಧ್ವಜಾರೋಹಣ, ಕುಂದಾಪುರ ಪುರಸಭೆ ನಿರ್ಮಿಸಿಕೊಟ್ಟ ಶೌಚಾಲಯ ಉದ್ಘಾಟನೆ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಅತೀ.ವಂದನೀಯ ಫಾದರ್ ಅನಿಲ್ ಡಿ ಸೋಜಾ ವಹಿಸಲಿದ್ದಾರೆ. ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಮೋಹನ ಸಾರಂಗ ಧ್ವಜಾರೋಹಣಗೈಯಲಿದ್ದು, ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ನೂತನ ಶೌಚಾಲಯವನ್ನು ಉದ್ಘಾಟಿಸಲಿದ್ದಾರೆ.

ಇಳಿಹೊತ್ತು 5.30ಕ್ಕೆ ಸುವರ್ಣ ಮಹೋತ್ಸವ ಸಮಾರಂಭ, ಸನ್ಮಾನ, ಸುವರ್ಣ ಸಂಚಿಕೆ ಸ್ವರ್ಣ ಮಂಜೂಷಾ ಬಿಡುಗಡೆಗೊಳ್ಳಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ವಹಿಸಲಿದ್ದಾರೆ. ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಸುವರ್ಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸೈಂಟ್ ಮೇರಿಸ್ ಹಿ.ಪ್ರಾ ಶಾಲೆ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ಸೈಂಟ್ ಮೇರಿಸ್ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ತದನಂತರ ಕುಣಿಕುಣಿ ನವಿಲೆ ನಾಟಕ, ಕರುಣಾಮಯಿ ಮೇರಿ ಮಾತೆ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.

ಡಿ.22ರಂದು ಶುಕ್ರವಾರ ಏರುಹೊತ್ತು 10 ಗಂಟೆಗೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ನಡೆಯಲಿದ್ದು, ಇಲ್ಲಿ ಪರಿಚಯ, ಪ್ರತಿಭಾ ಪ್ರದರ್ಶನ, ಮೋಜಿನ ಆಟ, ಸಾಂಸ್ಕøತಿಕ ಕಾರ್ಯಕ್ರಮ ಸಹ ಭೋಜನ ನಡೆಯಲಿದೆ. ಇಳಿಹೊತ್ತು 5.30ಕ್ಕೆ ಸುವರ್ಣ ಮಹೋತ್ಸವದ ಸಮಾರಂಭ, ಸನ್ಮಾನ, ಹಳೆ ವಿದ್ಯಾರ್ಥಿಗಳ ಉತ್ಸವ ಸಂಪನ್ನಗೊಳ್ಳಲಿದೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಸ ಪೂಜಾರಿ, ಕೋಟ ಗೀತಾನಂದ ಫೌಂಡೇಶನ್‍ನ ಪ್ರವರ್ತಕ ಆನಂದ ಸಿ.ಕುಂದರ್, ಯು.ಎಸ್.ಎ ಇನ್ನೋವೇಶನ್ ಬೋಯಿಂಗ್ ಸೀಟಲ್ ನ ಆಡಳಿತ ನಿರ್ದೇಶಕ ಪ್ರದೀಪ್ ಫೆರ್ನಾಂಡಿಸ್ ಆಗಮಿಸಲಿದ್ದಾರೆ.ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಹಳೆ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ರೂಪಕಲಾ ಕುಂದಾಪುರದಿಂದ ಹಾಸ್ಯಮಯ ನಗೆನಾಟಕ ಮೂರುಮುತ್ತು ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here