Sunday 11th, May 2025
canara news

ಕ್ರೀಡೆಯಿಂದ ಸಮಗ್ರ ವ್ಯಕ್ತಿತ್ವ : ಶೇಖರ್ ಶೆಟ್ಟಿ

Published On : 20 Dec 2017   |  Reported By : Rons Bantwal


ಸುರತ್ಕಲ್‍ನಲ್ಲಿ ಬಂಟರ ಕ್ರೀಡಾ ಕೂಟ ಉದ್ಘಾಟನೆ

ಸುರತ್ಕಲ್ : ಕಳೆದ ಸುಮಾರು 20 ವರ್ಷಗಳಿಂದ ದೇಶದಲ್ಲಿ ಕ್ರೀಡೆಗೆ ಉತ್ತಮ ಪ್ರೋತ್ಸಾಹ ದೊರೆಯುತ್ತಿದ್ದು, ಹೆಚ್ಚಿನ ಕ್ರೀಡಾಪಟುಗಳು ಮೂಡಿ ಬರುತ್ತಿದ್ದಾರೆ. ಕ್ರೀಡಾಳುಗಳಿಗೆ ಉತ್ತಮ ಅವಕಾಶ ಇದೆ. ಶಿಕ್ಷಣ ಜತೆಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಸುವುದರಿಂದ ವಿದ್ಯಾರ್ಥಿಗಳು ಸಮಗ್ರ ವ್ಯಕ್ತಿತ್ವ ಬೆಳೆಸಿಕೊಳ್ಳುವುದು ಸಾಧ್ಯ. ಈ ನಿಟ್ಟಿನಲ್ಲಿ ಹೆತ್ತವರು ಪ್ರೋತ್ಸಾಹ ನೀಡಬೇಕು ಎಂದು ಎಚ್‍ಪಿಸಿಎಲ್‍ನ ನಿವೃತ್ತ ಹಿರಿಯ ಪ್ರಬಂಧಕ ಶೇಖರ್ ಟಿ. ಹೇಳಿದರು.

ಅವರು ಸುರತ್ಕಲ್ ಬಂಟರ ಸಂಘ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ ಆಶ್ರಯದಲ್ಲಿ ಗೋವಿಂದ ದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಬಂಟರ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟರ ಯಾನೆ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ ಸಹ ಸಂಚಾಲಕ ಉಮೇಶ್ ರೈ, ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕಾರ್ಪೋರೇಟರ್ ಅಶೋಕ್ ಶೆಟ್ಟಿ, ಎಪಿಎಂಸಿ ಸದಸ್ಯ ಜಯಶೀಲ ಅಡ್ಯಂತಾಯ, ಸುರತ್ಕಲ್ ಬಂಟರ ಸಂಘದ ಕಾರ್ಯದರ್ಶಿ ಸೀತಾರಾಮ ರೈ, ಉಪಾಧ್ಯಕ್ಷ ಸುಧಾಕರ ಎಸ್. ಪೂಂಜಾ, ಕ್ರೀಡಾ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ, ಜತೆ ಕಾರ್ಯದರ್ಶಿ ಜಯರಾಮಶೆಟ್ಟಿ, ಸಂಘದ ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ರಾಜೇಶ್ವರಿ ಡಿ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯರು, ಸದಸ್ಯೆಯರಿಗಾಗಿ ಆಯಾ ಗ್ರಾಮಮಟ್ಟದಲ್ಲಿ ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ ಮೊದಲಾದ ಸ್ಪರ್ಧೆ ನಡೆಯಿತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here