Sunday 11th, May 2025
canara news

ಕರಾವಳಿಯಲ್ಲಿ ಹೆಚ್ಚಾಗಲಿದೆ ಗಾಳಿ- ಹವಮಾನ ಇಲಾಖೆಯಿಂದ ಮುನ್ಸೂಚನೆ

Published On : 22 Dec 2017   |  Reported By : canaranews network


ಮಂಗಳೂರು: ಒಖಿ ಚಂಡಮಾರುತ ಅಬ್ಬರದ ಬಳಿಕ ಇದೀಗ ಕರಾವಳಿ ಪ್ರದೇಶದಲ್ಲಿ ತೀವ್ರತೆರನಾದ ಗಾಳಿ ಬೀಸಲಿದೆ ಎಂದು ಸಮುದ್ರದ ತೀರ ಪ್ರದೇಶದ ಜನರಿಗೆ ಹವಮಾನ ಇಲಾಖೆ ಮುನ್ನೆಚರಿಕೆ ನೀಡಿದೆ.

ಗಂಟೆಗೆ ಸುಮಾರು 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಮೀನುಗಾರರು ಎಚ್ಚರ ವಹಿಸಬೇಕೆಂದು ತಿಳಿಸಿದೆ. ಗಾಳಿಯ ಪರಿಣಾಮ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಾಧ್ಯತೆ ಇದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗುವ ಸಂಭವ ಇದೆ.

ಈಗ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದ್ದು ಅದು ಡಿ. 25 ರ ವೇಳೆಗೆ ನಿಮ್ಮ ಒತ್ತಡವಾಗಿ ಮಾರ್ಪಾಡಾಗುವ ನಿರೀಕ್ಷೆ ಹೊಂದಲಾಗಿದೆ. ಉತ್ತರ ಕೇರಳದ ಸಮುದ್ರದಲ್ಲಿಯೂ ಮೇಲ್ಮೈಸುಳಿಗಾಳಿ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ದಕ್ಷಿಣ ಕನ್ನಡ , ಉಡುಪಿ, ಕಾಸರಗೋಡು ಮುಂತಾದ ಪ್ರದೇಶಗಳ ತೀರ ಪ್ರದೇಶದ ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here