Sunday 11th, May 2025
canara news

ಬಂಟ್ವಾಳ ಯೋಜನಾ ಮಟ್ಟದ ಮಕ್ಕಳ ದಿನಾಚರಣೆ

Published On : 23 Dec 2017   |  Reported By : Rons Bantwal


ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಂಟ್ವಾಳ, ತಾಲೂಕು ಸ್ತ್ರಿಶಕ್ತಿ ಬ್ಲಾಕ್ ಸೊಸೈಟಿ(ರಿ).ರೋಟರಿ ಆನ್ಸ್ ಕ್ಲಬ್ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ಯೋಜನಾ ಮಟ್ಟದ ಮಕ್ಕಳ ದಿನಾಚರಣೆ ಬಿಸಿರೋಡಿನ ಸ್ತ್ರಿಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ಮಕ್ಕಳ ಪ್ರತಿಭೆಗೆ ಪೂರಕವಾದ ವಾತಾವರಣ ಅಂಗನವಾಡಿಯಿಂದ ಮಾತ್ರ ಸಿಗಲು ಸಾಧ್ಯ ಎಂದರು.

ಆರೋಗ್ಯವಂತ ಮತ್ತು ಪ್ರಜ್ಞಾವಂತ ಮಕ್ಕಳ ಬೆಳವಣಿಗೆಗೆ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ, ಇಲಾಖೆಯ ಜೊತೆ ನಾವೆಲ್ಲರೂ ಜವಬ್ದಾರಿಯನ್ನು ಅರಿತು ಕೈಜೋಡಿಸಿದಾಗ ಯಶಸ್ವಿಯಾಗಲು ಸಹಾಯವಾಗುತ್ತದೆ ಎಂದರು. ಮುಖ್ಯ ಅತಿಥಿ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ ಮಾತನಾಡಿ ಪುರಸಭಾ ವ್ಯಾಪ್ತಿಯಲ್ಲಿರುವ ಅಂಗನಾವಡಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ ಇನ್ನೂ ಮುಂದೆಯೂ ಪೂರ್ಣ ಪ್ರಮಾಣದ ಸಹಕಾರ ನೀಡುವ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಝಾರಿ, ಕಾರ್ಯದರ್ಶಿ ನಾರಾಯಣ, ರೋಟರಿ ಆನ್ಸ್‍ನ ಅಧ್ಯಕ್ಷೆ ಗೌರಿ ಮಾದವ ಶೆಣೈ, ಕಾರ್ಯದರ್ಶಿ ಸುಮಾ ಶೆಣೈ, ಸ್ತ್ರಿಶಕ್ತಿ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಪುಪ್ಷಲತಾ ಎಮ್. ಶೆಟ್ಟಿ, ಪಲ್ಗುಣಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೀತಾ ಜಯತೀರ್ಥ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪ್ರಭಾರ ಶಿಶು ಯೋಜನಾಧಿಕಾರಿ ಗಾಯತ್ರಿ ಕಂಬಳಿ ಸ್ವಾತಿಸಿ, ಹಿರಿಯ ಮೇಲ್ವಿಚಾರಕಿ ಭಾರತಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಪ್ರಸ್ತಾವಿಸಿದರು. ಮೇಲ್ವಿಚಾರಕಿ ಸಿಂಧು ಕೆ,ಬಿ ಕಾರ್ಯಕ್ರಮ ನಿರೂಪಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here