Saturday 27th, April 2024
canara news

ಹೊಸ ವರ್ಷದ ಡಿ.ಜೆ ಪಾರ್ಟಿಗೆ ಅವಕಾಶ ನೀಡದಂತೆ ಸಂಘಟನೆಯಿಂದ ಮನವಿ

Published On : 28 Dec 2017   |  Reported By : canaranews network


ಮಂಗಳೂರು: ಹೊಸ ವರ್ಷ ಆಚರಣೆಯ ಹೆಸರಿನಲ್ಲಿ 31 ಡಿಸೆಂಬರ್ ರಂದು ನಡೆಯುವ ಡಿ ಜೆ ಪಾರ್ಟಿ, ಅಶ್ಲೀಲ ನೃತ್ಯಗಳಂತಹ ಕಾರ್ಯಕ್ರಮಕ್ಕೆ ಬಜರಂಗದಳ ಹಾಗೂ ವಿಶ್ವ ಹಿಂದು ಪರಿಷತ್ ವಿರೋಧ ವ್ಯಕ್ತಪಡಿಸಿದೆ.

ಈ ಹಿನ್ನಲೆಯಲ್ಲಿ ಬಜರಂಗದಳ ಮುಖಂಡರು ಮಂಗಳೂರು ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ಅವರನ್ನು ಡಿ 27 ರ ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮಂಗಳೂರಿನಲ್ಲಿರುವ ಎಲ್ಲಾ ಬಾರ್, ಪಬ್ ಗಳು ರಾತ್ರಿ 11:00 ಗಂಟೆ ಒಳಗೆ ಮುಚ್ಚಿಸಬೇಕು.

ಅಲ್ಲದೇ ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಡಿ ಜೆ ಪಾರ್ಟಿ, ಅಶ್ಲೀಲ ನೃತ್ಯ ಮತ್ತು ಮದ್ಯಪಾನ ಪಾರ್ಟಿ ಆಯೋಜನೆ ಮಾಡಿದ್ದು ಇದಕ್ಕೆ ಅನುಮತಿ ನೀಡಬಾರದು. ಈಗಾಗಲೇ ಲವ್ ಜಿಹಾದ್ ಜಿಲ್ಲೆಯಲ್ಲಿ ತೀವ್ರವಾಗಿದ್ದು ಮುಗ್ದ ಹೆಣ್ಣುಮಕ್ಕಳನ್ನು ಇಂತಹ ಕಾರ್ಯಕ್ರಮಗಳಿಗೆ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತಿದೆ.

ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ದಲ್ಲಿ ಕೆಲವೊಂದು ಯುವಕರು ಇಂತಹ ಕೃತ್ಯದಲ್ಲಿ ತೊಡಗಿದ್ದು ಇದರಿಂದಾಗಿ ಡ್ರಗ್ಸ್ ಮಾಫಿಯಾ, ಸೆಕ್ಶ್ ಮಾಫಿಯಾ ಜಾಲ ಹೆಚ್ಚಾಗುತ್ತಿದೆ. ಹೀಗಾಗಿ ಹೊಸವರ್ಷದ ಹೆಸರಿನಲ್ಲಿ ನಡೆಯುವ ಅನಾಚರಗಳಿಗೆ ಬ್ರೇಕ್ ಹಾಕಬೇಕೆಂದು ವಿನಂತಿಸಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here