Sunday 11th, May 2025
canara news

ನನ್ನ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ಪಾತ್ರವಿದೆ : ಸಚಿವ ರಮಾನಾಥ ರೈ

Published On : 28 Dec 2017   |  Reported By : canaranews network


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಬಂಟ್ವಾಳ ಕ್ಷೇತ್ರದಲ್ಲಿ ತಾನು 6 ಬಾರಿ ಗೆದ್ದು ಬರಲು ಮುಸ್ಲಿಂ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದಾರೆ.

ಮುಸ್ಲಿಂ ಸಮುದಾಯದ ಜನರ ಋಣ ಜನ್ಮ ಜನ್ಮಾಂತರಗಳಿಗೂ ತೀರಿಸಲು ಸಾಧ್ಯವಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಬಂಟ್ವಾಳ ವಿಧಾನಸಭಾ ಕ್ಷೇತ್ರ ದ ಹಿಂದೂ ಸಮುದಾಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಕುರಿತ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇತ್ತಿಚೆಗೆ ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಈ ಹೇಳಿಕೆ ನೀಡಿದ್ದಾರೆ. ರೈ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ರೈ ಅವರ ಜಾತ್ಯಾತೀತ ಸಿದ್ದಾಂತ ಬಗ್ಗೆ ಚರ್ಚೆ ಆರಂಭವಾಗಿದೆ.ಸಂಖ್ಯಾದೃಷ್ಠಿಯಲ್ಲಿ ಉಳ್ಳಾಲ ಕ್ಷೇತ್ರವನ್ನು ಬಿಟ್ಟರೆ ವಿಟ್ಲದಭಾಗವಾಗಿ ಸೇರಿಕೊಂಡಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅತ್ಯಂತ ಹೆಚ್ಚು ಮುಸ್ಲಿಮರು ಇರುವ ಕ್ಷೇತ್ರ. ಅದರಲ್ಲಿ ಕಡಿಮೆ ಸಂಖ್ಯೆಯಲ್ಲಿರುವವರು ಬಂಟರು. ಆದರೆ ಬ್ಯಾರಿ ಭಾಷೆ ಮಾತನಾಡುವ ಜನರ ಜಾತ್ಯಾತೀತ ನಿಲುವನ್ನು ಎಲ್ಲರೂ ಮೆಚ್ಚಬೇಕಾಗಿದೆ.ಜಾತಿ, ಧರ್ಮದ ಪರಿಧಿಯನ್ನು ಮೀರಿ ರಮಾನಾಥ ರೈ ವಿಧಾನಸಭೆಗೆ ಆಯ್ಕೆ ಮಾಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಮುಸ್ಲಿಂ ಸಮುದಾಯದ ಋಣ ಈ ಜನ್ಮದಲ್ಲಿ ತೀರಿಸಲು , ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಹರಿದಾಡುತ್ತಿತ್ತು. ಚರ್ಚೆಗೆ ಗ್ರಾಸವಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here