Sunday 11th, May 2025
canara news

ಕುಂದಾಪುರ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

Published On : 29 Dec 2017   |  Reported By : Rons Bantwal


ಬ್ರಿಟೀಷರ ಗುಲಾಮಗಿರಿಯಿಂದ ಭಾರತವನ್ನು ಸ್ವತಂತ್ರಗೊಳಿಸುವ ನಿಟ್ಟಿನಲ್ಲಿ 1885 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ್ನು ಹುಟ್ಟು ಹಾಕಲಾಯಿತು. ಕಾಂಗ್ರೆಸ್ ಎಂದರೆ ಕ್ರಾಂತಿಯೂ ಹೌದು, ಅಹಿಂಸಾ ಸಿದ್ದಾಂತವೂ ಹೌದು. ಕ್ರಾಂತಿಕಾರಿ ಚಳವಳಿಗಳ ಮೂಲಕ ಆರಂಭಗೊಂಡ ಕಾಂಗ್ರೆಸ್‍ನ ಸ್ವಾತಂತ್ರ್ಯ ಸಂಗ್ರಾಮ ನÀಂತರದ ದಿನಗಳಲ್ಲಿ ಮಹಾತ್ಮಗಾಂಧಿಯವರ ನೇತೃತ್ವದಲ್ಲಿ ಅಹಿಂಸಾ ಚಳವಳಿಯ ಸ್ವರೂಪ ಪಡೆಯಿತು. 1947ರಲ್ಲಿ ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕುವ ವೇಳೆಯಲ್ಲಿ ಒಂದು ಸಣ್ಣ ಗುಂಡು ಸೂಜಿಯು ತಯಾರಾಗುತ್ತಿರಲಿಲ್ಲ. ಆದರೆ ಇಂದು ಆರ್ಥಿಕ ಅಭಿವೃದ್ಧಿಯಲ್ಲಿ ವಿಶ್ವದ ಮುಂದುವರೆದ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯ ಸ್ಥಾನ ತಲುಪಲು ಕಾಂಗ್ರೆಸ್ ಪಕ್ಷದ ಮುತ್ಸದ್ಧಿ ನಾಯಕರುಗಳ ದೂರಾಲೋಚನೆಯ ಯೋಜನೆಗಳೇ ಕಾರಣವಾಗಿವೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ ಹೇಳಿದ್ದಾರೆ.

 

ಅವರು ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಎ.ಓ.ಹ್ಯೂಮ್ ಹಾಗೂ ದಾದಾ ಬಾಯಿ ನವರೋಜಿಯವರು ಕಾಂಗ್ರೆಸ್‍ನ ಸಂಸ್ಥಾಪಕರಲ್ಲಿ ಪ್ರಮುಖರಾಗಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್, ಸುಭಾಶ್ಚಂದ್ರ ಬೋಸ್, ಜವಾಹರಲಾಲ್ ನೆಹರೂರವರ ತ್ಯಾಗ ಬಲಿದಾನವನ್ನು ನೆನಪಿಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಮೀನುಗಾರರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ ಹೇಳಿದ್ದಾರೆ.

 

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ನಾರಾಯಣ ಆಚಾರ್, ಕೆ.ಶಿವಾನಂದ, ಎಪಿಎಂಸಿ ಉಪಾಧ್ಯಕ್ಷ ಗಣೇಶ್ ಸೇರೆಗಾರ್, ಕಾಂಗ್ರೆಸ್ ಐಟಿಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ್ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷರುಗಳಾದ ದೇವಕಿ ಸಣ್ಣಯ್ಯ, ಹಾರುನ್ ಸಾಹೇಬ್, ಪುರಸಭಾ ಸದಸ್ಯರಾದ ಶ್ರೀಧರ ಸೇರೆಗಾರ್, ಚಂದ್ರಶೇಖರ ಖಾರ್ವಿ, ಪ್ರಭಾಕರ ಕೋಡಿ, ಕೇಶವ ಭಟ್, ಇಂಟಕ್ ಅಧ್ಯಕ್ಷ ಚಂದ್ರ ಅಮೀನ್, ಐಟಿ ಸೆಲ್ ಜಿಲ್ಲಾಧ್ಯಕ್ಷ ವಿಶ್ವಾಸ್ ಶೆಟ್ಟಿ, ರಾಹುಲ್ ಗಾಂಧಿ ಬ್ರಿಗೇಡ್‍ನ ಜಿಲ್ಲಾಧ್ಯಕ್ಷ ರಟ್ಟಾಡಿ ಸಂಪತ್ ಕುಮಾರ್ ಶೆಟ್ಟಿ, ಮುಖಂಡರುಗಳಾದ ಮೇರ್ಡಿ ಸದಾನಂದ ಹೆಗ್ಡೆ, ವಿಠಲ ಕಾಂಚನ್, ಆನಂದ ಭಂಡಾರಿ, ಕೆ. ಸುರೇಶ್, ಅಂಪಾರು ಶಂಭು ಶೆಟ್ಟಿ, ಯುವ ಮುಖಂಡರಾದ ರಘುರಾಮ ನಾಯ್ಕ, ಶಶಿಕಾಂತ ಕಾಂಚನ್, ಅಂಪಾರು ಪ್ರಶಾಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here