Sunday 11th, May 2025
canara news

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಟಿ.ಎಂ ಶಹೀದ್ ನೇಮಕ

Published On : 31 Dec 2017   |  Reported By : Canaranews network


ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸುಳ್ಯದ ಟಿ. ಎಂ ಶಹೀದ್ ನೇಮಕಗೊಂಡಿದ್ದಾರೆ.ಇವರು 1988 ರಿಂದ ನೆಹರು ಮೆಮೋರಿಯಲ್ ಕಾಲೇಜಿನ ಎನ್ಎಸ್ಯುಐ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ 1989 ರಿಂದ 90 ರವರೆಗೆ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ 1991 ರಿಂದ 1998 ರವರೆಗೆ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ 1998- 2010 ರವರೆಗೆ ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ 2010 – 2015 ರವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

1993-94 ರಲ್ಲಿ ಎರಡು ಬಾರಿ ಕೆ.ವಿ.ಜಿ. ಕಾನೂನು ಕಾಲೇಜಿನ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸೆನೆಟ್ ಆಯ್ಕೆ ಸಮಿತಿ ಸದಸ್ಯರಾಗಿ 1994-95 ರಲ್ಲಿ ಕೆ.ವಿ.ಜಿ. ಕಾನೂನು ಕಾಲೇಜಿನ ವಿದ್ಯಾರ್ಥಿ ಯೂನಿಯನ್ ನ ಉಪಾಧ್ಯಕ್ಷರಾಗಿ ಹಾಗೂ 1995-2000ರಲ್ಲಿ ರಾಜೀವ ಗಾಂಧಿ ಯುವಶಕ್ತಿ ಮತ್ತು ಗ್ರಾಮೀಣಾಭಿವೃದ್ದಿ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.2002 ರಲ್ಲಿ ರಾಜ್ಯಯುವ ಜನಾಂಗ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಮನಗಂಡು ರಾಜ್ಯ ಸರಕಾರದ ರಾಜ್ಯ ಯುವ ಪ್ರಶಸ್ತಿಯನ್ನು ಪಡೆದಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here