Sunday 11th, May 2025
canara news

ಕೋಮುಗಲಭೆಗೆ ಪ್ರಚೋದನೆ, ಪೊಲೀಸ್ ಇಲಾಖೆಯಿಂದ ಇಬ್ಬರ ಗಡಿಪಾರು

Published On : 31 Dec 2017   |  Reported By : Canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಹೆಚ್ಚುತ್ತಿರುವ ಮತೀಯ ಗಲಭೆಗೆ ಕಾರಣಕರ್ತರನ್ನು ಗುರುತಿಸುವಲ್ಲಿ ದ.ಕ.ಜಿಲ್ಲಾ ಪೊಲೀಸ್ ಇಲಾಖೆ ತೊಡಗಿದ್ದು, ಈ ಸಂಬಂಧ ಇಬ್ಬರನ್ನು ಗಡಿಪಾರು ಮಾಡಿದೆ.ಮತೀಯ ಗಲಭೆಗೆ ಪ್ರಚೋದನೆ ನಿಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡ ಖಲೀಲ್ ಎಂಬುವವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

'ಗಡಿಪಾರಿಗೆ ಗುರಿಯಾಗಿರುವ ಇಬ್ಬರೂ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾರೆ. ಜೂನ್ ತಿಂಗಳಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಮತೀಯ ಗಲಭೆಗೆ ಕಾರಣರಾಗಿದ್ದರು' ಎಂದು ದಕ್ಷಿಣ ಕನ್ನಡ ಎಸ್ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here