Sunday 11th, May 2025
canara news

ಸಾರ್ವಜನಿಕ ವೇದಿಕೆಯಲ್ಲಿ ಬಿಕ್ಕಿಬಿಕ್ಕಿ ಅತ್ತ ಕೇಂದ್ರದ ಮಾಜಿ ಸಚಿವ

Published On : 31 Dec 2017   |  Reported By : Canaranews network


ಮಂಗಳೂರು : ರಾಜ್ಯ ಅರಣ್ಯ ಸಚಿವ ರಮಾನಾಥ ರೈ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಚಾರದ ಬಗ್ಗೆ ತಿಳಿದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಕ್ಕಿಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ಮಂಗಳೂರಿನ ಗರೋಡಿ ಶ್ರೀ ಬ್ರಹ್ಮಬೈದರ್ಕಳ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನಾರ್ದನ ಪೂಜಾರಿ, ಸಚಿವ ರಮಾನಾಥ ರೈ ತನ್ನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಪ್ರಸ್ತಾಪಿಸಿ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಗಳಗಳನೆ ಅತ್ತು ಬಿಟ್ಟರು.

ಸಾವಿರಾರು ಜನ ಸೇರಿದ್ದ ಸಭೆಯಲ್ಲಿ 80 ವರ್ಷದ ಹಿರಿಯರಾದ ಜನಾರ್ದನ ಪೂಜಾರಿಯವರು ಅತ್ತು ಕರೆದಾಗ, ಸಭೆಯಲ್ಲಿದ್ದ ಎಲ್ಲರೂ ಕಣ್ಣೀರಾದರು. ಮಂಗಳೂರು ಮೇಯರ್ ಕವಿತಾ ಸನಿಲ್, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.ಇತ್ತೀಚೆಗೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಮದುವೆ ಕಾರ್ಯಕ್ರಮ ಒಂದರಲ್ಲಿ ಸಚಿವ ರಮಾನಾಥ ರೈ, ಪೂಜಾರಿಯವರನ್ನು ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದರು ಎಂದು ಹೇಳಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here