Monday 12th, May 2025
canara news

ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಸಿಟಿ ರವಿ ಆಗ್ರಹ

Published On : 04 Jan 2018   |  Reported By : canaranews network


ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದುರ್ಷರ್ಮಿಗಳಿಂದ ಹತ್ಯೆಗೇಡಾದ ದೀಪಕ್ ರಾವ್ ಅವರ ಕುಟುಂಬಕ್ಕೆ ಪರಿಹಾರವಾಗಿ ರಾಜ್ಯ ಸರಕಾರ 25 ಲಕ್ಷ ರೂಪಾಯಿ ನೀಡಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಮೃತಪಟ್ಟ ದೀಪಕ್ ರಾವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಂಗಳೂರಿನ ಎ.ಜೆ.ಆಸ್ಪತ್ರೆಗ ತರಲಾಗಿತ್ತು.

ಈ ಹಿನ್ನೆಲೆಯಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ದೀಪಕ್ ರಾವ್ ಕುಟುಂಬಕ್ಕೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಿರಂತರವಾಗಿ ನಡೆಯುತ್ತಿವೆ. ತರಬೇತಿ ಪಡೆದಿರುವ ದುರ್ಷರ್ಮಿಗಳಿಂದಲೇ ಈ ರೀತಿಯ ಕೊಲೆ ಮಾಡಲು ಸಾಧ್ಯ," ಎಂದು ಹೇಳಿದ ಅವರು, "ಕಾಂಗ್ರೆಸ್ ನ ಓಟ್ ಬ್ಯಾಂಕ್ ನೀತಿಯೇ ಈ ಕೊಲೆಗಳಿಗೆ ಕಾರಣವಾಗುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here