ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದಿದೆ.ಮೊಬೈಲ್ ಕಂಪನಿಯೊಂದರ ಎಕ್ಸಿಕ್ಯೂಟಿವ್ ಆಗಿರುವ ದೀಪಕ್ (32) ಹತ್ಯೆಯಾದ ಯುವಕ. ಕಾರಿನಲ್ಲಿ ಬಂದ ನಾಲ್ವರ ತಂಡವೊಂದು ದೀಪಕ್ ಬೈಕ್ ಅಡ್ಡಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿತ್ತು.ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದ ದೀಪಕ್, ಸ್ಥಳೀಯ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ.
ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಸ್ಥಳೀಯರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ.ಮಜೀದ್ ಎಂಬವರ ಮೊಬೈಲ್ ಶಾಪ್ ನಲ್ಲಿ ದೀಪಕ್ ಕೆಲಸಕ್ಕಿದ್ದರು ಎಂದು ಹೇಳಲಾಗಿದೆ. ಕಲೆಕ್ಷನ್ ಹಣವನ್ನು ಅಂಗಡಿಗೆ ಕೊಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ಕಾಟಿಪಳ್ಳದ ಮೂಡಾಯಿಕೋಡಿ ಎಂಬಲ್ಲಿ ಹತ್ಯೆ ಮಾಡಿದ್ದಾರೆ. ತಕ್ಷಣ ಸುರತ್ಕಲ್ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ