Monday 12th, May 2025
canara news

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ದ್ವಿ ಚಕ್ರ ವಾಹನ ನಡುವೆ ಅಪಘಾತ; ಸವಾರರಿಬ್ಬರ ಸಾವು

Published On : 05 Jan 2018   |  Reported By : canaranews network


ಮಂಗಳೂರು: ದ.ಕ.ಜಿಲ್ಲೆಯ ಪಾಣೆಮಂಗಳೂರು ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ದ್ವಿ ಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿರುವ ಇಬ್ಬರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಸಜಿಪ ಮೂಲದ ಈ ಇಬ್ಬರು ಮೃತ ಯುವಕರನ್ನು ಮಹಮದ್ ಹರ್ಷಿದ್ (18 ) ಹಾಗೂ ಅಜಾದ್ (20) ಎಂದು ಗುರುತಿಸಲಾಗಿದೆ. ಇವರು ಬಂಟ್ವಾಳದಿಂದ ಮೆಲ್ಕಾರ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಯುವಕರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಮೆಲ್ಕಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here