Monday 12th, May 2025
canara news

ಮಂಗಳೂರಲ್ಲಿ ಬಶೀರ್ ಹಲ್ಲೆ ಪ್ರಕರಣ: ನಾಲ್ವರ ಬಂಧನ

Published On : 06 Jan 2018   |  Reported By : Canaranews network


ಮಂಗಳೂರು :ಜನವರಿ 3 ರಂದು ದೀಪಕ್ ರಾವ್ ಕೊಲೆಯಾದ ದಿನವೇ ಮಂಗಳೂರಿನ ಕೊಟ್ಟಾರ ಚೌಕಿ ಬಳಿ ಬಶೀರ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.ಸಂದೀಪ್, ಧನುಷ್, ಸೃಜಿತ್, ಕಿಶನ್ ಬಂಧಿತ ಆರೋಪಿಗಳು.

ಸಿಸಿಟಿ ದೃಶ್ಯಗಳ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ನಾಲ್ವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ವಶಕ್ಕೆ ಪಡೆದವರಲ್ಲಿ ಇಬ್ಬರು ಕಾಸರಗೋಡಿನ ಕುಂಜತ್ತೂರು ಹಾಗು ಮಂಗಲ್ಪಾಡಿ ಮೂಲದವರಾಗಿದ್ದಾರೆ. ಇನ್ನಿಬ್ಬರು ಮಂಗಳೂರು ಹೊರವಲಯದ ಅಡ್ಯಾರ್ ಅಳಪೆಯವರು ಎಂದು ಹೇಳಲಾಗಿದೆ.

2 ಬೈಕ್ ನಲ್ಲಿ ಬಂದಿದ್ದ 4 ಮಂದಿ ದುಷ್ಕರ್ಮಿಗಳ ತಂಡ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ಬಶೀರ ಅವರ ಮೇಲೆ ಜನವರಿ 3ರ ರಾತ್ರಿ ನಗರದ ಕೊಟ್ಟಾರ ಚೌಕಿ ಎಂಬಲ್ಲಿ ಮಾರಕಾಸ್ತ್ರಗಳಿಂಧ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡ ಅಬ್ದುಲ್ ಬಶೀರ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತ ಭರಿಸಲಿದೆ ಎಂದು ಶಾಸಕ ಮೊಯಿದ್ದೀನ್ ಬಾವಾ ತಿಳಿಸಿದ್ದಾರೆ.ಈ ನಡುವೆ ಹಲ್ಲೆಯ ಸಿಸಿಟಿವಿ ದೃಶ್ಯಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಿಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here