Friday 26th, April 2024
canara news

ಶಾಂತಿ ಕದಡುವ ಸಂಘಟನೆಗಳು ಬ್ಯಾನ್ : ಸಿದ್ಧರಾಮಯ್ಯ

Published On : 06 Jan 2018   |  Reported By : Canaranews network


ಮಂಗಳೂರು: ಶಾಂತಿ ಕದಡುವ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಲ್ಲದೆ ಅವುಗಳನ್ನ ಬ್ಯಾನ್ ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಬಿಜೆಪಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಆದುದರಿಂದ ಶಾಂತಿ ಕದಡುವ ಸಂಘಟನೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು. ಇಂತಹ ಘಟನೆಗಳನ್ನ ಮರುಕಳಿಸಿ ಸರ್ಕಾರದ ಇಮೇಜ್ ಡ್ಯಾಮೇಜ್ ಮಾಡಲು ಬಿಜೆಪಿ ಯತ್ನಿಸುತ್ತಿದೆ. ಇದನ್ನ ಸರ್ಕಾರ ಸಮರ್ಥವಾಗಿ ಎದುರಿಸಲಿದೆ ಎಂದರು.ಕಾಂಗ್ರೆಸ್ ಪಕ್ಷಕ್ಕೆ ಬರಲು ಹಲವು ಶಾಸಕರು ಸಿದ್ಧರಿದ್ದಾರೆ.

ಆದರೆ ಆರ್.ಎಸ್.ಎಸ್. ಐಡಿಯಾಲಜಿ ಹಿನ್ನಲೆ ಇರುವವರನ್ನು ಸೇರಿಸಿಕೊಳ್ಳುವುದಿಲ್ಲ.ಗೌರಿ ಲಂಕೇಶ್ ಹತ್ಯೆ ಆಗಿ ನಾಲ್ಕು ತಿಂಗಳು ಕಳೆದಿದೆ. ಹಂತಕರ ಹತ್ಯೆ ಕಂಡುಹಿಡಿಯಲು ಸರ್ಕಾರಕ್ಕೆ ಸಾದ್ಯವಾಗಿಲ್ಲ. ಹಾಗಾದರೆ ಇದು ಸರ್ಕಾರದ ವೈಪಲ್ಯವೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಗೌರಿಹಂತಕರ ಸುಳಿವು ಸಿಕ್ಕಿದೆ. ಪೂರ್ಣ ಸಾಕ್ಷಿಗಳು ದೊರೆತ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here