Monday 12th, May 2025
canara news

ಕನ್ನಡ ಸಂಘ ಸಾಂತಾಕ್ರೂಜ್ ಸಂಸ್ಥೆಯಿಂದ ಅರ್ವತ್ತರ ಆಚರಣೆಗೆ

Published On : 07 Jan 2018   |  Reported By : Rons Bantwal


ಪೂರ್ವಭಾವಿ ಸಭೆಯಲ್ಲಿ ವಜ್ರಮಹೋತ್ಸವ ಸಂಭ್ರಮಕ್ಕೆ ಸಮಿತಿ ರಚನೆ

(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ, ಜ.07: ಕನ್ನಡ ಸಂಘ ಸಾಂತಾಕ್ರೂಜ್ (ರಿ.) ಸಂಸ್ಥೆಯು ಅರ್ವತ್ತರ ಸಂಭ್ರಮಾಚರಣೆಯಲ್ಲಿದ್ದು ಆ ನಿಮಿತ್ತ ಸಿದ್ಧತೆ ಇಂದಿಲ್ಲಿ ಸಂಜೆ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಎಲ್.ವಿ ಅಮೀನ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಿತ್ತು.

ಸಭೆಯಲ್ಲಿ ಪದಾಧಿಕಾರಿಗಳು, ಸದಸ್ಯರನೇಕರು ಹಾಜರಿದ್ದು ವಜ್ರಮಹೋತ್ಸವ ಸಂಭ್ರಮ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ವೈಶಿಷ್ಟ ್ಯಮಯವಾಗಿ ಆಚರಿಸುವಂತೆ ನಿರ್ಧಾರಿಸಲಾಯಿತು. ಅದಕ್ಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಯೋಜನೆಗÀಳನ್ನು ರೂಪಿಸಲಾಗಿ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮಗಳ ಆಯೋ ಜನೆ, ಅತಿಥಿüಗಣ್ಯರ ಆಹ್ವಾನ, ಸ್ಮರಣಸಂಚಿಕೆ ರಚನೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಯಿತು. ಹಾಗೂ ವಜ್ರಮಹೋತ್ಸವ ಆಚರಣೆಗಾಗಿ ಸಮಿತಿವೊಂದನ್ನು ರಚಿಸಲಾಯಿತು. ಸಮಿತಿಗೆ ಪ್ರಸಕ್ತ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನೊಳಗೊಂಡು ಡಾ| ಆರ್.ಕೆ ಶೆಟ್ಟಿ ಕಲೀನಾ, ಎನ್.ಟಿ ಪೂಜಾರಿ, ನಿತ್ಯಾನಂದ ಡಿ.ಕೋಟ್ಯಾನ್, ಸಿಎ| ಪ್ರಕಾಶ್ ಶೆಟ್ಟಿ, ಸಿಎ| ಐ.ಆರ್ ಶೆಟ್ಟಿ, ಸಿಎ| ಸುನೀಲ್ ಶೆಟ್ಟಿ, ಸದಾನಂದ ಸಫಲಿಗ, ಭುಜಂಗ ಆರ್.ಶೆಟ್ಟಿ, ವಿಕ್.ಶೆಟ್ಟಿ (ಟೆಂಡರ್‍ಫ್ರೆಶ್), ಪ್ರಕಾಶ್ ಸಿ.ಶೆಟ್ಟಿ, ಬಿ.ಆರ್ ರಾವ್ ಅವರನ್ನು ಆಯ್ಕೆಗೊಳಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ, ಗೌ| ಪ್ರ| ಕೋಶಾಧಿಕಾರಿ ಸುಧಾಕರ್ ಉಚ್ಚಿಲ್, ಜೊತೆ ಕಾರ್ಯ ದರ್ಶಿ ಚಂದ್ರಹಾಸ ಜೆ.ಕೋಟ್ಯಾನ್, ಶಿಕ್ಷಣ ಸಮಿತಿ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅವಿೂನ್, ಕಾರ್ಯದರ್ಶಿ ಶಕೀಲಾ ಪಿ.ಶೆಟ್ಟಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ, ವನಿತಾ ವೈ.ನೋಂದ, ಮಾಜಿ ಉಪಾಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಗೋವಿಂದ ಆರ್.ಬಂಗೇರಾ, ಶಾರದಾ ಎಸ್.ಪೂಜಾರಿ, ಸುಮಾ ಎಂ.ಪೂಜಾರಿ, ಶಾಲಿನಿ ಎಸ್.ಶೆಟ್ಟಿ, ಆರ್.ಪಿ ಹೆಗ್ಡೆ, ಸಲಹಾ ಸಮಿತಿ ಸದಸ್ಯರಾದ ನಾರಾಯಣ ಎಸ್.ಶೆಟ್ಟಿ, ಬಿ.ಆರ್ ಪೂಂಜಾ, ಎನ್.ಎಂ ಸನೀಲ್, ವಿಶೇಷ ಆಮಂತ್ರಿತ ಸದಸ್ಯರಾದ ಶಿವರಾಮ ಎಂ.ಕೋಟ್ಯಾನ್, ಲಿಂಗಪ್ಪ ಬಿ.ಅವಿೂನ್, ವಿಜಯಕುಮಾರ್ ಕೆ.ಕೋ ಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಎಲ್.ವಿ ಅಮೀನ್ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯದರ್ಶಿ ಲಕ್ಷ್ಮೀ ಎನ್.ಕೋಟ್ಯಾನ್ ಪ್ರಾರ್ಥನೆಯನ್ನಾಡಿದರು. ಗೌ| ಪ್ರ| ಕಾರ್ಯದರ್ಶಿ ಸುಜಾತಾ ಆರ್.ಶೆಟ್ಟಿ ಸಭಾ ಕಲಾಪ ನಿರ್ವಹಿಸಿ ವಂದನಾರ್ಪಣೆಗೈದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here