Monday 12th, May 2025
canara news

ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ (U Penn) ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಕ್ರಮಗಳ ಅಧ್ಯಯನ

Published On : 07 Jan 2018   |  Reported By : Rons Bantwal


ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ 8 ವಿದ್ಯಾರ್ಥಿಗಳನ್ನೊಳಗೊಂಡ ತಂಡವು 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳ ವಿಶೇಷ ಅಧ್ಯಯನಕ್ಕಾಗಿ ಆಗಮಿಸಿದ್ದು ಯೋಜನೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಗ್ರಾಮೀಣಾಭಿವೃಧ್ಧಿ, ಮಹಿಳಾ ಸಬಲೀಕರಣ ಯೋಜನೆಯ ಕೇಂದ್ರ ಕಛೇರಿಗೆ ಭೇಟಿ ನೀಡಿದ ತಂಡಕ್ಕೆ ಡಾ. ಎಲ್.ಹೆಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ಹರೀಶ್ ರಾವ್ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಛೇರಿ ಹಾಗೂ ಉತ್ಪಾದನಾ ಘಟಕ ಹಾಗೂ ಮಾರಾಟ ಮಳಿಗೆಗೆ ಈ ತಂಡ ಭೇಟಿ ನೀಡಿತು. ಉಡುಪಿ ಜಿಲ್ಲೆಯಲ್ಲಿ ಯೋಜನೆ ಪ್ರಾಯೋಜಿತ ಪ್ರಗತಿಬಂಧು, ಸ್ವಸಹಾಯ, ಜ್ಞಾನವಿಕಾಸ ಕೇಂದ್ರ, ತಂಡವು ಭೇಟಿ ನೀಡಿ ಅಧ್ಯಯನ ನಡೆಸಿ ಸಿರಿ ನಿರ್ದೇಶಕಿ ಮನೋರಮಾ ಭಟ್, ಶ್ರೀಮತಿ ಜಯಂತಿ, ಯೋಜನಾಧಿಕಾರಿ, ಶ್ರೀ ವಸಂತ ನಾಯಕ್, ಯೋಜನಾಧಿಕಾರಿಯವರು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here