Monday 12th, May 2025
canara news

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳು ಜಪಾನ್ ಗೆ

Published On : 09 Jan 2018


ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮತ್ತು ಜಪಾನಿನ ಕುಮಾಮೊಟೊ ವಿಶ್ವ ವಿದ್ಯಾಲಯದ ನಡುವಣ ವಿದ್ಯಾರ್ಥಿ - ವಿನಿಮಯ ಕಾರ್ಯಕ್ರಮದಡಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ 9 ವಿದ್ಯಾರ್ಥಿಗಳು ಜಪಾನ್ ಗೆ ತೆರಳಲಿದ್ದಾರೆ . ಕಾರ್ಯಕ್ರಮದ ಸಂಯೋಜಕ ಡಾ . ಸತ್ಯನಾರಾಯಣ ಮತ್ತು ವಿದ್ಯಾರ್ಥಿಗಳ ತಂಡವು ಜನವರಿ 28 ರಿಂದ ಫೆಬ್ರವರಿ 4 ರವರೆಗೆ ಜಪಾನ್ ಸರ್ಕಾರದ ಆಹ್ವಾನದ ಮೇರೆಗೆ ' ಜಪಾನ್ - ಏಷ್ಯಾ ವಿಜ್ಞಾನ ಯುವ ವಿನಿಮಯ ಕಾರ್ಯಕ್ರಮ ' ದನ್ವಯ ಅಲ್ಲಿ ಕಿರು ಅಧ್ಯಯನ ನಡೆಸಲಿದ್ದಾರೆ . ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿಗಳ ಸಂಪೂರ್ಣ ಖರ್ಚು ವೆಚ್ಚವನ್ನು ಜಪಾನ್ ಸರ್ಕಾರದ 'ಜಪಾನ್ ಸೈನ್ಸ್ ಎಂಡ್ ಟೆಕ್ನಾಲಜಿ (ಜೆ ಎಸ್ ಟಿ )’ ಭರಿಸಲಿದೆ .

"ಸಕುರಾ ವಿಜ್ಞಾನ ವಿನಿಮಯ ಕಾರ್ಯಕ್ರಮ " ಎಂದು ಕರೆಯಲ್ಪಡುವ ಈ ಯೋಜನೆಯು ಏಷ್ಯಾದ ಪ್ರತಿಭಾವಂತ ವಿದ್ಯಾರ್ಥಿಗಳು ಜಪಾನ್ ಗೆ ಭೇಟಿ ಕೊಟ್ಟು ಅಲ್ಲಿನ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನ ವನ್ನು ಅಧ್ಯಯನ ಮಾಡಲು ವೇದಿಕೆ ಕಲ್ಪಿಸಿಕೊಡುತ್ತದೆ . ಜಪಾನಿನ ಕುಮಾಮೊಟೊ ವಿವಿ ಯೊಂದಿಗೆ ಒಡಂಬಡಿಕೆ ಮಾಡಿಕೊಂಡ ದೇಶದ ನಾಲ್ಕನೇ ಸಂಸ್ಥೆ ಎಂಬ ಹೆಗ್ಗಳಿಕೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನದ್ದಾಗಿದೆ .

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ. ಜಪಾನಿನ ಆಧುನಿಕ ವೈಜ್ಞಾನಿಕ ವಿಧಾನಗಳನ್ನು ತಿಳಿಯಲು ವಿದ್ಯಾರ್ಥಿಗಳಿಗೆ ಇದೊಂದು ಸದವಕಾಶವೆಂದು ತಿಳಿಸಿದ್ದಾರೆ .

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here