Thursday 28th, March 2024
canara news

ದೀಪಕ್ ರಾವ್ ಹತ್ಯೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಕೈವಾಡವಿದೆಯೆಂದು ಆರೋಪಿಸಿದ ಎಚ್ಡಿಕೆ ವಿರುದ್ಧ ದೂರು ದಾಖಲು

Published On : 10 Jan 2018   |  Reported By : canaranews network


ಮಂಗಳೂರು : ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಡಾ.ವೈ.ಭರತ್ ಶೆಟ್ಟಿ ಅವರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡದ ವೈ.ಭರತ್ ಶೆಟ್ಟಿ "ದೀಪಕ್ ಕೇಸ್ ನಲ್ಲಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಅಂತ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ ಇವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.ಕುಮಾರಸ್ವಾಮಿ ವಿರುದ್ದ ಒಂದು ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ. ಇದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಈ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಎಂದು ನಿನ್ನೆ ಮೈಸೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಬಿಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

 

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here