Wednesday 1st, May 2024
canara news

ಬಷೀರ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿ ಸೋರಿಕೆ ವಿರುದ್ಧ ಕ್ರಮ: ಕಮಿಷನರ್

Published On : 13 Jan 2018   |  Reported By : Canaranews network


ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ನಡೆದ ಅಬ್ದುಲ್ ಬಷೀರ್ ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು "ಅಹ್ಮದ್ ಬಷೀರ್ ಹತ್ಯೆ ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ತನಿಖೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.

ಆದರೆ ಆ ದೃಶ್ಯಗಳು ಮಾಧ್ಯಮಕ್ಕೆ ಸೋರಿಕೆಯಾಗಿದೆ. ಈ ಬಗ್ಗೆ ಖಾಸಗಿ ಕಟ್ಟಡದ ಮಾಲೀಕರನ್ನು ವಿಚಾರಣೆ ನಡೆಸಲಾಗಿದೆ. ಅವರು ತಾನು ಯಾರಿಗೂ ಆ ದೃಶ್ಯಾವಳಿಗಳನ್ನು ನೀಡಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಇಲಾಖೆಯ ಸಿಬ್ಬಂದಿ ಸೋರಿಕೆ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ತಪ್ಪು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು," ಎಂದು ಅವರು ಸ್ಪಷ್ಟಪಡಿಸಿದರು.

ಇನ್ನು, "ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್ ಗುಂಡೇಟಿನಿಂದ ಗಾಯಗೊಂಡ ಇಬ್ಬರು ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಆರೋಪಿಗಳಾದ ಪಿಂಕಿ ನವಾಜ್ ಮತ್ತು ರಿಜ್ವಾನ್ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಲಾಗುವುದು," ಎಂದು ಅವರು ವಿವರ ನೀಡಿದರು. ದೀಪಕ್ ರಾವ್, ಅಬ್ದುಲ್ ಬಷೀರ್ ಕೊಲೆ ಪ್ರಕರಣ ಸೇರಿದಂತೆ ಮುದಸ್ಸಿರ್ ಕೊಲೆಯತ್ನ ಪ್ರಕರಣಗಳ ತನಿಖೆಯನ್ನು ಎಸಿಪಿ ಮಟ್ಟದ ಅಧಿಕಾರಿಗಳು ನಡೆಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗೃಹ ಸಚಿವರು ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಟಿ.ಆರ್ ಸುರೇಶ್ ತಿಳಿಸಿದರು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here