Sunday 11th, May 2025
canara news

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅವಘಡ

Published On : 13 Jan 2018   |  Reported By : Canaranews network


ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿದ್ದ ಭಾರೀ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ನಡೆದಿದೆ.

ಪೈಲಟ್ ಸಮಯ ಪ್ರಜ್ಞೆಯಿಂದಾಗಿ ಅಪಘಾತ ತಪ್ಪಿದ್ದು ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ರನ್ ವೇ ಸುತ್ತಲಿದ್ದ ಹುಲ್ಲು ತೆಗೆಯಲು ಟ್ರಾಕ್ಟರ್ ಕರೆಸಲಾಗಿತ್ತು. ಈ ಟ್ರಾಕ್ಟರನ್ನು ಅದರ ಚಾಲಕ ರನ್ ವೇ ಅಂತ್ಯದಲ್ಲಿ ನಿಲ್ಲಿಸಿದ್ದ.

ಇನ್ನೇನು ಮುಂಬೈಗೆ ಹೊರಡಬೇಕಿದ್ದ ಜೆಟ್ ಏರ್ ವೇಸ್ ವಿಮಾನ ಟೇಕ್ ಆಫ್ ಆಗುವುದರಲ್ಲಿತ್ತು. ಆದರೆ ಚಾಲಕನಿಗೆ ಟ್ರಾಕ್ಟರ್ ನಿಂತಿರುವುದು ತಿಳಿದಿರಲಿಲ್ಲ.

ಆಗ ಈ ಟ್ರಾಕ್ಟರ್ ರನ್ ವೇ ಯಲ್ಲಿ ಇರುವುದನ್ನು ಏರ್ ಟ್ರಾಫಿಕ್ ಕಂಟ್ರೋಲರ್ ನೋಡಿದ್ದಾರೆ. ತಕ್ಷಣ ವಿಮಾನದ ಟೇಕಾಫ್ ನ್ನು ಅವರು ರದ್ದುಗೊಳಿಸಿದ್ದಾರೆ.ಒಂದೊಮ್ಮೆ ವಿಮಾನ ಟೇಕಾಫ್ ಆಗಲು ಮುಂದುವರಿಯುತ್ತಿದ್ದಲ್ಲಿ ಟ್ರಾಕ್ಟರ್ ಗೆ ಗುದ್ದಿ ಭಾರೀ ಅವಘಡ ಸಂಭವಿಸಲಿತ್ತು. ಆದರೆ ಅದೃಷ್ಟಾವಶಾತ್ ಅಪಘಾತ ಕೂದಲೆಳೆ ಅಂತರದಲ್ಲಿ ತಪ್ಪಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here