Wednesday 1st, May 2024
canara news

ಹತ್ಯೆಯಾದ ದೀಪಕ್, ಬಶೀರ್ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

Published On : 13 Jan 2018   |  Reported By : Canaranews network


ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ದೀಪಕ್ ತಾಯಿ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದರು.ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಆರೋಪಿಗಳಿಗೆ ತಕ್ಕ ಶಿಕ್ಷೆಯಾದಲ್ಲಿ ದೀಪಕ್ ರಾವ್ ಆತ್ಮಕ್ಕೆ ಶಾಂತಿ ಸಿಕ್ಕಂತೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಇತ್ತೀಚೆಗೆ ಆಗಮಿಸಿ ಪರಿಹಾರ ನೀಡುವಲ್ಲಿ ಮುತುವರ್ಜಿ ವಹಿಸಿದ್ದಾರೆ ಎಂದರು.

ಶರತ್ ಮಡಿವಾಳ ಕುಟುಂಬಕ್ಕೆ ಸರಿಯಾಗಿ ಪರಿಹಾರ ಸಿಕ್ಕಿಲ್ಲ ಎಂಬ ದೂರುಗಳಿವೆ ಎಂಬ ಪ್ರಶ್ನೆಗೆ ಆ ಸಂದರ್ಭ ತಾನು ಗೃಹ ಮಂತ್ರಿಯಾಗಿರಲಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.ನಂತರ, ಅಬ್ದುಲ್ ಬಶೀರ್ ಅವರ ಮನೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ]ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಬೇಕು; ಕೃತ್ಯದಲ್ಲಿ 7 ಮಂದಿ ಇದ್ದರು ಎನ್ನಲಾಗುತ್ತಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ಇನ್ನುಳಿದ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಅಲ್ಲದೆ ಇದರ ಹಿಂದಿರುವ ಶಕ್ತಿಗಳನ್ನು ಪತ್ತೆ ಮಾಡಬೇಕೆಂದು ಕುಟುಂಬಸ್ಥರು ಮನವಿ ನೀಡಿದರು. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here