ಉಡುಪಿ ಜಿಲ್ಲಾ ಅಲ್ಪ ಸಂಖ್ಯಾತರ ವಿಭಾಗದ ಕುಂದಾಪುರ ಬ್ಲಾಕ್ ಅಧ್ಯಕ್ಷರಾಗಿ ಬಿ.ಹಾರೂನ್ ಅವರನ್ನು ಜಿಲ್ಲಾ ಅಧ್ಯಕ್ಷರಾದ ಇಸ್ಮಾಯಿಲ್ ಅತ್ರಾಡಿ ಅವರು ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ನಡೆದಿದೆ. ಕುಂದಾಪುರ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವ ಬಿ.ಹಾರೂನ್ ಅವರು ಕುಂದಾಪುರ ಪುರಸಭಾ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು.