Monday 12th, May 2025
canara news

ಬಶೀರ್ ಕೊಲೆ ಪ್ರಕರಣ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

Published On : 17 Jan 2018   |  Reported By : canaranews network


ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿ ಬಳಿ ನಡೆದ ಅಬ್ದುಲ್ ಬಶೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ಕಾಸರಗೋಡು ನಿವಾಸಿಗಳಾದ ಲತೀಶ್ (24) ಹಾಗು ಪುಷ್ಪರಾಜ್ (23) ಎಂದು ಗುರುತಿಸಲಾಗಿದೆ.ಜನವರಿ 3ರಂದು ರಾತ್ರಿ 10:30 ರ ಸುಮಾರಿಗೆ ಮಂಗಳೂರಿನ ಕೊಟ್ಟಾರ ಚೌಕಿ ಬಳಿ ಫಾಸ್ಟ್ ಪುಡ್ ವ್ಯಾಪಾರವನ್ನು ನಡೆಸುತ್ತಿದ್ದ ಅಬ್ದುಲ್ ಬಶೀರ್ ತನ್ನ ಫಾಸ್ಟ್ ಪುಡ್ ಹೊಟೇಲ್ ನ್ನು ಬಂದ್ ಮಾಡಿ ಮನೆಗೆ ಹೊರಟಿದ್ದ ವೇಳೆ ಬೈಕ್ ನಲ್ಲಿ ಬಂದ ಆರೋಪಿಗಳು ಅಬ್ದುಲ್ ಬಶೀರ್ ಅವರ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು.ಗಂಭೀರವಾಗಿ ಗಾಯಗೊಂಡ ಅಬ್ದುಲ್ ಬಶೀರ್ ರವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಈ ಮಧ್ಯೆ ಅಬ್ದುಲ್ ಬಶೀರ್ ಚಿಕಿತ್ಸೆ ಫಲಕಾರಿಯಾಗದೇ ಜನವರಿ 7 ರಂದು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಕೃತ್ಯದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳಾದ ಶ್ರೀಜಿತ್ ಪಿ.ಕೆ , ಕಿಶನ್ ಪೂಜಾರಿ, ಧನುಷ್ ಪೂಜಾರಿ, ಸಂದೇಶ್ ಕೋಟ್ಯಾನ್ ಎಂಬವರನ್ನು ಈ ಹಿಂದೆ ಬಂಧಿಸಿದ್ದರು.ಪ್ರಕರಣದ ತನಿಖೆ ಚುರುಕುಗೊಂಡಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here