Thursday 2nd, May 2024
canara news

ಹತ್ಯೆಯಾದ ಇಲ್ಯಾಸ್ ಪತ್ನಿ ಬರೆದಿದ್ದಾರೆ ಎನ್ನಲಾದ ಪತ್ರ ಈಗ ವೈರಲ್

Published On : 17 Jan 2018   |  Reported By : canaranews network


ಮಂಗಳೂರು : ಉಳ್ಳಾಲ ಟಾರ್ಗೆಟ್ ಗ್ರೂಪ್ ರೂವಾರಿ, ನಟೋರಿಯಸ್ ರೌಡಿ ಇಲ್ಯಾಸ್ ಹತ್ಯೆ ಪ್ರಕರಣವನ್ನು ಚುರುಕುಗೊಳಿಸುವಂತೆ ಒತ್ತಾಯಿಸಿ ಪೊಲೀಸರಿಗೆ ಇಲ್ಯಾಸ್ ಪತ್ನಿ ಫರಾನಾ ಬರೆದಿರುವ ಪತ್ರ ಎನ್ನಲಾದ ಒಂದು ಪತ್ರದ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾನು ಈ ಪತ್ರ ನೊಂದು ಬರೆದಿದ್ದು ತನಗೆ ನ್ಯಾಯ ದೊರೆಯಬೇಕು. ತನ್ನ ಪತಿ ಇಲ್ಯಾಸ್ ನನ್ನು ಕೊಂದ ಪಾಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಇಲ್ಲವಾದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಸಾರಂಶದ ಪತ್ರ ಬರೆದಿದ್ದಾರೆ. ಆದರೆ ವೈರಲ್ ಆದಾ ಈ ಪತ್ರ ಖುದ್ದು ಇಲ್ಯಾಸ್ ಪತ್ನಿ ಫರಾನಾ ಬರೆದಿದ್ದೋ ಅಥವಾ ಆಕೆಯ ಹೆಸರಿನಲ್ಲಿ ಇನ್ಯಾರೋ ಪತ್ರ ಬರೆದಿದ್ದಾರೋ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.ಜ 6 ಶನಿವಾರ ಬೆಳಗ್ಗೆ ಟಾರ್ಗೆಟ್ ಇಲ್ಯಾಸ್ ನ್ನು ಮಂಗಳೂರಿನ ಜೆಪ್ಪು ಕುದ್ಪಾಡಿಯಲ್ಲಿರುವ ಆತನ ಫ್ಲಾಟ್ ಗೆ ಸ್ನೇಹಿತರ ನೆಪದಲ್ಲಿ ನುಗ್ಗಿದ ಆಗಂತುಕರಿಬ್ಬರು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಟಾರ್ಗೆಟ್ ಗ್ಯಾಂಗಿನಲ್ಲಿ ಒಂದು ಕಾಲದಲ್ಲಿ ಒಟ್ಟಿಗಿದ್ದವರೇ ಕೃತ್ಯ ನಡೆಸಿದ್ದರೆಂಬ ಶಂಕೆ ವ್ಯಕ್ತವಾಗಿತ್ತು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here