Saturday 5th, July 2025
canara news

ದಕ್ಷಿಣ ಕನ್ನಡ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ

Published On : 22 Jan 2018   |  Reported By : canaranews network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿಯಾಗಿ ಡಾ.ರವಿಕಾಂತೇ ಗೌಡ ಅವರನ್ನು ನೇಮಕ ಮಾಡಲಾಗಿದೆ.ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ರವಿಕಾಂತೇ ಗೌಡ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದಕ್ಷಿಣ ಕನ್ನಡ ಎಸ್ಪಿಯಾಗಿ ನೇಮಿಸಲಾಗಿದೆ. ಸುಧೀರ್ ಕುಮಾರ್ ರೆಡ್ಡಿ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ.

ಅತೀ ಸೂಕ್ಷ್ಮ ಪರಿಸ್ಥಿತಿಯಲ್ಲಿ ಜಿಲ್ಲೆಗ ಆಗಮಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಗಳಿಂದ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದಿದ್ದರು.ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಅತ್ಯಂತ ಜಟಿಲ ಪ್ರಕರಣವನ್ನು ಭೇದಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ನಡುವೆ ಜಿಲ್ಲೆಯಲ್ಲಿ ಶಾಂತಿ ಭಂಗಕ್ಕೆ ಕಾರಣವಾಗುತ್ತಿದ್ದ ಅಪರಾಧಿಗಳನ್ನು ಗಡಿಪಾರು ಮಾಡು ಪ್ರಕ್ರಿಯೆ ಆರಂಭಿಸಿದ್ದರು.ಇದು ಚುನಾವಣೆ ಹೊಸ್ತಿಲಲ್ಲಿ ಕೆಲ ರಾಜಕಾರಣಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here