Monday 6th, May 2024
canara news

ದೀಪಕ್ ರಾವ್ ಹತ್ಯೆ ಪ್ರಕರಣ - ಕೃತ್ಯಕ್ಕೆ ಸಹಾಯ ಮಾಡಿದ ಆರು ಜನ ಅರೆಸ್ಟ್

Published On : 24 Jan 2018   |  Reported By : canaranews network


ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳೊಂದಿಗೆ ಸಂಚು ರೂಪಿಸಿ ಕೃತ್ಯಕ್ಕೆ ಸಹಾಯ ಮಾಡಿದ ಆರೋಪದಲ್ಲಿ ಮತ್ತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊಲೆ ಸಂಚು ಹಾಗೂ ಕೊಲೆ ಕೃತ್ಯಕ್ಕೆ ಸಹಾಯ ಮಾಡಿದ ಆರೋಪದಲ್ಲಿ ಚೊಕ್ಕಬೆಟ್ಟುವಿನ ಮಹಮ್ಮದ್ ರಫೀಕ್ ಅಲಿಯಾಸ್ ಮಾಂಗೋ ರಫೀಕ್ (24),ಇರ್ಫಾನ್, ಕಾಟಿಪಳ್ಳದ ಮಹಮ್ಮದ್ ಅನಾಸ್ ಯಾನೆ ಅಂಚು, ಮಹಮ್ಮದ್ ಝಾಹೀದ್ ಯಾನೆ ಜಾಹೀ , ಜೋಕಟ್ಟೆಯ ನಿವಾಸಿ ನವಾಝ್ ಹಾಗೂ ಹಿದಾಯಿತುಲ್ಲಾ ಬಂದಿಸಿರುವುದಾಗಿ ಹೇಳಿದ್ದಾರೆ.

ಈಗಾಗಲೇ ಪ್ರಕರಣದಲ್ಲಿ ಮೊಹಮ್ಮದ್ ನೌಶಾದ್ ಮತ್ತು ಮೊಹಮ್ಮದ್ ಇರ್ಷಾನ್ ಅಲಿಯಾಸ್ ಇರ್ಶಾ, ಮೊಹಮ್ಮದ್ ನವಾಜ್ ಅಲಿಯಾಸ್ ಪಿಂಕಿ ನಾವಾಝ್, ರಿಜ್ವಾನ್ ಅಲಿಯಾಸ್ ಇಜ್ಜು, ಅಬ್ದುಲ್ ಅಜೀಜ್ ಮತ್ತು ಅಬ್ದುಲ್ ಅಜೀಮ್ ನ್ನು ಪೊಲೀಸರು ಮೊದಲು ಬಂಧಿಸಿದ್ದಾರೆ ಅವರು ಈಗಾಗಲೇ ನ್ಯಾಯಂಗ ಬಂಧನದಲ್ಲಿದ್ದಾರೆ ಎಂದು ತಿಳಿಸಿದರು.ಕೊಲೆಗೆ ಒಳಸಂಚು ರೂಪಿಸಿದ ಹಾಗೂ ಸಹಾಯ ಮಾಡಿದ ಪ್ರಮುಖ ಆರೋಪಿಗಳಾದ ಮಹಮ್ಮದ್ ರಫೀಕ್ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಎರಡು ಕೊಲೆ ಯತ್ನ ಪ್ರಕರಣ ಮತ್ತು ಇರ್ಫಾನ್ ವಿರುದ್ದ ಒಂದು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಅನಸ್ ವಿರುದ್ದ ಸುರತ್ಕಲ್ ಠಾಣೆಯಲ್ಲಿ ಒಂದು ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದರು.

 




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here