Tuesday 30th, April 2024
canara news

ಕುಂದಾಪುರ ಕಾಂಗ್ರೇಸ್ 69ನೇ ಗಣರಾಜ್ಯೋತ್ಸವ ಆಚರಣೆ

Published On : 26 Jan 2018   |  Reported By : Bernard Dcosta


ಸಂವಿಧಾನ ಬದಲಾವಣೆ ಕುರಿತು ಯೋಜನೆಯ ಅಪಾಯಕಾರಿ ಮಲ್ಯಾಡಿ

69ನೇ ವರ್ಷದ ಸಂಭ್ರಮದ ಗಣರಾಜ್ಯೋತ್ಸವದ ಆಚರಣೆಯ ಈ ಸಂದರ್ಭದಲ್ಲಿ ಕೆಲವು ಸ್ಥಾಪಿತ ಹಿತಾಸಕ್ತ ಸಂಘಟನೆಗಳು ಸಂವಿಧಾನದ ಬದಲಾವಣೆಯ ಕುರಿತು ಆಡುತ್ತಿರುವ ಮಾತು ಖಂಡನೀಯ. ಸಮಾನತೆ ಸಾರುವ ಅಂಬೇಡ್ಕರ್ ಸಂವಿಧಾನದ ಬದಲಾವಣೆ ಕುರಿತ ಯೋಚನೆಯೇ ಅಪಾಯಕಾರಿ. ಅದು ಈ ದೇಶದ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಬುಡಮೇಲುಗೊಳಿಸುವ ಹುನ್ನಾರ ಹೊಂದಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದ್ದಾರೆ.

ಅವರು ಇಂದು ಕುಂದಾಪುರ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ನಗರ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ, ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್, ಕಾಂಗ್ರೇಸ್ ಐಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಎ.ಪಿ.ಎಂ.ಸಿ ಉಪಾಧ್ಯಕ್ಷ ಗಣೇಶ್ ಶೇರುಗಾರ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಹಾರೂನ್ ಸಾಹೇಬ್, ಬ್ಲಾಕ್ ಕಾರ್ಯದರ್ಶಿ ಶಿವಾನಂದ ಕೆ, ಯುವ ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ್ ಶೆಟ್ಟಿ, ಮಹಿಳಾ ಕಾಂಗ್ರೇಸ್‍ನ ಜ್ಯೋತಿ ಪುತ್ರನ್, ಆಶಾ ಕರ್ವಾಲೋ, ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಚಂದ್ರ ಅಮೀನ್, ಕೇಶವ ಭಟ್, ಮುಖಂಡ ಸುರೇಶ್ ಕೆ, ವಿಜಯಧರ ಕೆ.ವಿ, ಯುವ ಮುಖಂಡರಾದ ಕೋಡಿ ಸುನಿಲ್ ಪೂಜಾರಿ, ರೋಶನ್ ಬೆರೆಟ್ಟೋ, ಶಶಿಕಾಂತ್ ಕಾಂಚನ್, ರಾಜೇಶ್ ಖಾರ್ವಿ, ಸಂಪತ್ ಕುಮಾರ್, ಶಶಿಧರ, ದಿನೇಶ, ಶೇಖರ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here