Tuesday 13th, May 2025
canara news

ಜೈಲಿನಲ್ಲೇ ಹಫ್ತಾ ವಸೂಲಿ, 8 ಜನರ ಮೇಲೆ ಪ್ರಕರಣ ದಾಖಲು

Published On : 27 Jan 2018   |  Reported By : canaranews network


ಮಂಗಳೂರು: ಜೈಲಿನಲ್ಲೇ ವಿಚಾರಣಾಧಿನ ಖೈದಿಗಳನ್ನು ಬೆದರಿಸಿ ಸಹ ಖೈದಿಗಳೇ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ ಘಟನೆ ಮಂಗಳೂರು ಕಾರಾಗೃಹದಲ್ಲಿ ಬೆಳಕಿಗೆ ಬಂದಿದೆ.ಕೆಆರ್ಐಡಿಎಲ್ ಸಂಸ್ಥೆಗೆ ವಂಚನೆ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಗೆ ಸಹ ಖೈದಿಗಳು ಜೀವ ಬೆದರಿಕೆ ಹಾಕಿ 15 ಲಕ್ಷ ವಸೂಲಿ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಈ ಸಂಬಂಧ ಎಂಟು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಕೆಆರ್ಐಡಿಎಲ್ ಸಂಸ್ಥೆಯಲ್ಲಿ ಕೆಲವು ತಿಂಗಳುಗಳ ಹಿಂದೆ 55 ಕೋಟಿ ರೂಪಾಯಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ಸಂಸ್ಥೆಯ 3 ಮಂದಿ ಅಧಿಕಾರಿಗಳಾದ ಸಿಜೋ ಕೆ.ಜೋಸ್, ಸುನಿಲ್ ಮತ್ತು ಜೆರಿ ಫೌಲ್ ಎಂಬವರನ್ನು ವಂಚನೆ ಆರೋಪದ ಮೇಲೆ ಬಂಧಿಸಲಾಗಿತ್ತು.ಮಂಗಳೂರು ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರುವ ಸಿಜೋ ಕೆ.ಜೋಸ್, ಸುನಿಲ್ ಮತ್ತು ಜೆರಿ ಫೌಲ್ ರೋಪಿಗಳ ಮೇಲೆ ಇತರೆ ಪ್ರಕರಣದಲ್ಲಿ ಜೈಲಿನಲ್ಲಿರುವ ಸಹ ಕೈದಿಗಳು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ 15 ಲಕ್ಷ ಮೊತ್ತವನ್ನು ಸಹಚರರ ಮೂಲಕ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನಿಲ್ ಎಂಬುವರಿಗೆ ಸೇರಿದ ಐಷಾರಾಮಿ ಕಾರನ್ನು ತಮ್ಮ ಸಹಚರರ ಸಹಾಯದಿಂದ ಅನೂಪ್ ಕುಮಾರ್ ಎಂಬುವರ ಹೆಸರಿಗೆ ದಾಖಲೆಗಳನ್ನು ಸೃಷ್ಟಿಸಿ ವರ್ಗಾವಣೆ ಮಾಡಿದ್ದರು ಎಂದು ಹೇಳಲಾಗಿದೆ. ಈ ಕುರಿತು ಪೌಲ್ ಎಂಬುವರು ಮಂಗಳೂರು ಬರ್ಕೆ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಈಗಾಗಲೇ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಿಥುನ್ ಪೂಜಾರಿ ಕಲ್ಲಡ್ಕ, ತಿಲಕ್ರಾಜ್ ಆಕಾಶಭವನ, ಶಿವರಾಜ್ ಕೋಟೆಕಾರು, ರಾಜು ಪರಂಗಿಪೇಟೆ ಹಾಗೂ ನಿಖಿಲ್ ವೀರನಗರ ಎಂಬುವರ ವಿರುದ್ಧ ಕೇಸು ದಾಖಲಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here