Thursday 2nd, May 2024
canara news

ಕೊಲೆ, ದರೋಡೆಗೆ ಸಂಚು-ನಾಲ್ವರ ಸೆರೆ

Published On : 04 Feb 2018   |  Reported By : canaranews network


ಮಂಗಳೂರು: ಮಂಗಳೂರು ನಗರದ ಫಳ್ನೀರ್ ಬಳಿ ದರೋಡೆ ಹಾಗೂ ಕೊಲೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಮಂಗಳೂರು

ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಟಾಟಾ ಸುಮೋ ವಾಹನವೊಂದರಲ್ಲಿ ಬಂದ 9-10 ಮಂದಿ ಯುವಕರು ದರೋಡೆ ಹಾಗೂ ಕೊಲೆಗೆ ಸಂಚು ರೂಪಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳೊಂದಿಗೆ ದರೋಡೆ ಹಾಗೂ ಕೊಲೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮನೋಜ್ ಕುಮಾರ್, ಪ್ರಸಾದ್ ಯಾನೆ ಪಚ್ಚು , ಶ್ರವಣ್ , ಸುಜಿತ್ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾರಕಾಯುಧ, , 40 ಗ್ರಾಂ ಗಾಂಜಾ ಮೊಬೈಲ್ ಫೋನ್ ಗಳು, ಟಾಟಾ ಸುಮೋ ಕಾರು, ಸೇರಿಸಂತೆ 1 ಲಕ್ಷದ 19 ಸಾವಿರ ಮೌಲ್ಯದ ಸೊತ್ತುಗಳಾನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here