Wednesday 14th, May 2025
canara news

ಹತ್ಯೆಯಾದ ದೀಪಕ್ ರಾವ್ ಮನೆಗೆ ಭೇಟಿ ನೀಡಲಿದ್ದಾರೆ ಅಮಿತ್ ಶಾ

Published On : 10 Feb 2018   |  Reported By : canaranews network


ಮಂಗಳೂರು:ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಫೆ. 19 ರಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದ ಕರಾವಳಿಯಲ್ಲಿ ಮತ್ತೆ ಕಮಲ ಅರಳಿಸಲು ರಣತಂತ್ರ ರೂಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅಮಿತ್ ಶಾ ಫೆ. 18 ರಿಂದ 20ರವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಪಕ್ಷದ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸಲಿರುವ ಅಮಿತ್ ಶಾ ಫೆ.19 ರಂದು ಕೊಲೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೂ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.ಫೆ. 18 ರಂದು ರಾತ್ರಿ 8.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಮಂಗಳೂರಿನಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.ಫೆ. 19 ರಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here