Sunday 18th, February 2018
canara news

ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಕೊಲೆ ಪ್ರಕರಣ; ಆರೋಪಿ ಸೆರೆ

Published On : 10 Feb 2018   |  Reported By : canaranews network


ಮಂಗಳೂರು: ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಉಳ್ಳಾಲ ನಿವಾಸಿ ದಾವೂದ್ ಎಂದು ಗುರುತಿಸಲಾಗಿದ್ದು ಈತನನ್ನು ಮಂಗಳೂರು ಪೊಲೀಸರು ಮುಂಬಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬಂಧಿಸಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿ ದಾವೂದ್ ಜನವರಿ 13 ರಂದು ಇಲ್ಯಾಸ್ ಮೇಲೆ ನಡೆದ ದಾಳಿಯ ಸೂತ್ರದಾರ ಎಂದು ಆರೋಪಿಸಲಾಗಿದೆ.

ಬಂಧಿತ ಪ್ರಮುಖ ಆರೋಪಿ ದಾವೂದ್ ಕೂಡ ಕುಖ್ಯಾತ ಟಾರ್ಗೆಟ್ ಗ್ಯಾಂಗ್ ಸದಸ್ಯ ನಾಗಿದ್ದು, ಇಲ್ಯಾಸ್ ಮೇಲಿನ ದ್ವೇಷ ಹಾಗೂ ಟಾರ್ಗೆಟ್ ಗ್ಯಾಂಗ್ ನ ಮೇಲೆ ಹಿಡಿತ ಸಾಧನೆಯ ಉದ್ದೇಶದಿಂದ ಇಲ್ಯಾಸ್ ನನ್ನು ಕೊಲೆ ಮಾಡಲಾಗಿತ್ತು ಎಂದು ಹೇಳಲಾಗಿದೆ .ಇಲ್ಯಾಸ್ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಈಗಾಗಲೇ ಸಮೀರ್ ಎಂಬವನನ್ನು ಕೇರಳದ ಅಡಗುತಾಣದಿಂದ ನಿನ್ನೆ ಬಂಧಿಸಿದ್ದರು.ಟಾರ್ಗೆಟ್ ಗ್ಯಾಂಗ್ ನ ಲೀಡರ್ ಇಲ್ಯಾಸ್ ನನ್ನು ಜನವರಿ13 ರ ಮುಂಜಾನೆ ದುಷ್ಕರ್ಮಿಗಳು ಕೊಲೆಗೈದಿದ್ದರು. ಹಲವಾರು ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಇಲ್ಯಾಸ್ ಜಾಮೀನಿನ ಮೇಲೆ ಹೊರಗೆ ಬಂದ ಎರಡು ದಿನ ಅಂತರದಲ್ಲೇ ಇಲ್ಯಾಸ್ ನನ್ನು ಹತ್ಯೆ ಮಾಡಲಾಗಿತ್ತು.

 
More News

ಬೀಜಾಡಿಯಲ್ಲಿ ಗಂಡು ಕಲೆ ಯಕ್ಷಗಾನ ಉತ್ಸವ ಉದ್ಘಾಟನೆ
ಬೀಜಾಡಿಯಲ್ಲಿ ಗಂಡು ಕಲೆ ಯಕ್ಷಗಾನ ಉತ್ಸವ ಉದ್ಘಾಟನೆ
ಕೇಂದ್ರ ಸರ್ಕಾರದಿಂದ ಅಡಿಕೆ ಬೆಳೆಗಾರರಿಗೆ ಗಂಡಾಂತರ: ಐವನ್ ಡಿಸೋಜಾ
ಕೇಂದ್ರ ಸರ್ಕಾರದಿಂದ ಅಡಿಕೆ ಬೆಳೆಗಾರರಿಗೆ ಗಂಡಾಂತರ: ಐವನ್ ಡಿಸೋಜಾ
ಉಪ್ಪಿನಂಗಡಿಯಲ್ಲಿ ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್
ಉಪ್ಪಿನಂಗಡಿಯಲ್ಲಿ ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್

Comment Here