Wednesday 14th, May 2025
canara news

ಫೆ.17: ಖಾರ್ ಪೂರ್ವದ ಶ್ರೀ ಶನಿ ಮಹಾತ್ಮ ಸೇವಾ ಸಮಿತಿಯಲ್ಲಿ 51ನೇ ವಾರ್ಷಿಕ ಶನೀಶ್ವರ ಮಹಾಪೂಜೆ

Published On : 13 Feb 2018   |  Reported By : Rons Bantwal


ಮುಂಬಯಿ, ಫೆ.13: ಮುಂಬಯಿ ಉಪನಗರದ ಖಾರ್ ಪೂರ್ವದಲ್ಲಿ ತುಳು ಕನ್ನಡಿಗರ ಸಂಚಾಲಕತ್ವದ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ (ರಿ.) ಸಂಚಾಲಕತ್ವದಿಂದ ಸ್ಥಳಿಯ ಸಾಯಿಬಾಬಾ ರಸ್ತೆಯಲ್ಲಿನ ಜವಹಾರ್‍ನಗರ್‍ನ ಪಹೇಲ್ವಾನ್ ಚಾಳ್‍ನಲ್ಲಿ ಕಳೆದ ಸುಮಾರು ಐದು ದಶಕಗಳಿಂದ ಸೇವಾ ನಿರತ ಸದ್ಯ ಸಾಯಿಧಾಮ್ ಬಿಲ್ಡಿಂಗ್‍ನಲ್ಲಿ ಸೇವಾ ನಿರತ ಶ್ರೀ ಶನಿಮಹಾತ್ಮ ಮಂದಿರದಲ್ಲಿ 51ನೇ ವಾರ್ಷಿಕ ಶನೀಶ್ವರ ಮಹಾಪೂಜೆಯನ್ನು ಇದೇ ಫೆ.17ರ ಶನಿವಾರ ಹಮ್ಮಿಕೊಳ್ಳಲಾಗಿದೆ.

ಶನೀಶ್ವರ ಮಹಾಪೂಜೆ ಅಂಗವಾಗಿ ಅಂದು ಶನಿವಾರ ಬೆಳಿಗ್ಗೆ 6.00 ಗಂಟೆಯಿಂದ ಗಣಹೋಮ, 8.00 ಗಂಟೆಯಿಂದ ಶ್ರೀಸತ್ಯನಾರಾಯಣ ಮಹಾಪೂಜೆ, ಮಧ್ಯಾಹ್ನ 11.00 ಗಂಟೆಯಿಂದ ಕಲಶ ಪ್ರತಿಷ್ಠಾ, ಭಜನೆ ಅಪರಾಹ್ನ 3.00 ಗಂಟೆಯಿಂದ ಶನೀಶ್ವರ ಗ್ರಂಥ ಪಾರಾಯಣ, ಸಂಜೆ 7.00 ಗಂಟೆಯಿಂದ ಮಂಗಳಾರತಿ, ರಾತ್ರಿ ತೀರ್ಥ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದಿನಾಂಕ ಫೆ.19ನೇ ಆದಿತ್ಯವಾರ ಅಪರಾಹ್ನ 2.30 ಗಂಟೆಯಿಂದ ಸಾಂತಾಕ್ರೂಜ್ ಪೂರ್ವದಲ್ಲಿನ ಬಿಲ್ಲವ ಭವನದಲ್ಲಿ ಸಮಿತಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಗುರುನಾರಾಯಣ ಯಕ್ಷಗಾನ ಮಂಡಳಿ ಸಾಂತಕ್ರೂಜ್ ಅವರಿಂದ `ತುಳುನಾಡ ಸಿರಿ ಮಹಾತ್ಮೆ' ಯಕ್ಷಗಾನ ಪ್ರದರ್ಶಿಸಲಿದೆ.

ಆ ಪ್ರಯುಕ್ತ ಮಹಾನಗರದಲ್ಲಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಈ ಪುಣ್ಯಾಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದವನ್ನು ಸ್ವೀಕರಿ ಶ್ರೀ ಶನಿದೇವರ ಕೃಪೆಗೆ ಪಾತ್ರರಾಗಬೇಕಾಗಿ ಸೇವಾ ಸಮಿತಿ ಪದಾಧಿಕಾರಿಗಳು, ಕಾರ್ಯಕಾರಿ ಸಮಿಯ ಸದಸ್ಯರು, ವಿಶ್ವಸ್ಥ ಸದಸ್ಯರು, ಮಹಿಳಾ ಮಂಡಳಿ, ಯುವ ವಿಭಾಗ, ಉಪ ಸಮಿತಿ ಸದಸ್ಯರೆಲ್ಲರ ಪರವಾಗಿ ಸಮಿತಿಯ ಗೌ| ಪ್ರ| ಕಾರ್ಯದರ್ಶಿ ಯೋಗೇಶ್ ಹೆಜ್ಮಾಡಿ ಈ ಮೂಲಕ ವಿನಂತಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here