Wednesday 14th, May 2025
canara news

ಜನಪರ ಕಾಳಜಿಯ ಕ್ರೀಯಾಶೀಲ ಯುವನಾಯಕ ರಾಕೇಶ್ ಮಲ್ಲಿ : ಮಾಣಿ ಗೋಪಾಲ್

Published On : 17 Feb 2018   |  Reported By : Bernard Dcosta


ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆದ್ದ ಜನಪ್ರತಿನಿಧಿಯೊಬ್ಬ ತನ್ನ ಅಧಿಕಾರಾವಧಿಯ ಸಂಪೂರ್ಣ 5 ವರ್ಷಗಳ ಕಾಲ ಜನರೊಂದಿಗಿದ್ದು ಸರಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ತನ್ನ ಕ್ಷೇತ್ರದ ಜನರಿಗೆ ಸಿಗುವಂತೆ ಶ್ರಮಿಸÀಬೇಕಾಗುತ್ತದೆ. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ಕಳೆದ ಬಾರಿ ಮಂತ್ರಿ ಪದವಿ ಸಿಗಲಿಲ್ಲವೆಂದು ಹದಿನಾಲ್ಕು ತಿಂಗಳು ಅವಧಿಗೆ ಮುಂಚಿತವಾಗಿ ರಾಜೀನಾಮೆ ನೀಡಿದ್ದರು. ಈ ಬಾರಿ ಯಾವುದೇ ಕಾರಣವಿಲ್ಲದೆ ನಾಲ್ಕು ತಿಂಗಳು ಮುಂಚಿತವಾಗಿ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ಹೀಗೆ ಪದೇ ಪದೇ ರಾಜೀನಾಮೆ ನೀಡುವುದರಿಂದ ಕ್ಷೇತ್ರದ ಜನತೆ ಸರಕಾರದಿಂದ ಸಿಗುವ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹಾಗಾಗಿ ಮುಂದಿನ ಬಾರಿ ಮತ ಚಲಾಯಿಸುವ ವೇಳೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮತ್ತು ಶಾಸಕ ಸ್ಥಾನದ ಮಹತ್ವ ಅರಿಯದ ಅಥವಾ ಕಾಳಜಿ ಹೊಂದಿಲ್ಲದ ಶಾಸಕರು ನಮಗೆ ಬೇಕೇ ಎಂದು ಮತದಾರರು ಗಂಭೀರವಾಗಿ ಚಿಂತಿಸಬೇಕಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಪಾದರಸದಂತೆ ಸಂಚಾರ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ರಾಜ್ಯ ಇಂಟಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್‍ನ ಸಂಭಾವ್ಯ ಅಭ್ಯರ್ಥಿ ರಾಕೇಶ್ ಮಲ್ಲಿಯವರು ಓರ್ವ ಕ್ರೀಯಾಶೀಲ ಯುವ ನಾಯಕರಾಗಿದ್ದು ಜನಸೇವೆ ಮಾಡುವ ತುಡಿತ ಹೊಂದಿದ್ದಾರೆ. ಆ ಕಾರಣದಿಂದ ಈ ಬಾರಿ ಶ್ರೀಯುತ ಮಲ್ಲಿಯವರಿಗೆ ಮತ ನೀಡಿ ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿಕೊಳ್ಳಿ ಎಂದು ರಾಜ್ಯ ಹಿಂದುಳಿದ ವರ್ಗ ಉಪಾಧ್ಯಕ್ಷ ಮಾಣಿ ಗೋಪಾಲ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಅವರು ಇಂದು ಹಾಲಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿಯ ಕಾಂಗ್ರೆಸ್ ಹಿರಿಯ ನಾಯಕ ದಿವಂಗತ ಸದಾಶಿವ ಶೆಟ್ಟರ ಮನೆಯ ವಠಾರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ನಾಯಕರ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬೆಳ್ವೆ ಸತೀಶ್ ಕಿಣಿ, ಕಾಂಗ್ರೆಸ್ ಐಟಿಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪಂಚಾಯತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾಥರ್À ಶೆಟ್ಟಿ ಅಮಾಸೆಬೈಲು ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ, ಹೆಂಗವಳ್ಳಿ ಗ್ರಾಮ ಪಂಚಾಯತ್ ಸದಸ್ಯ ವಸುಂಧರ ಹೆಗ್ಡೆ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ್ ಶೆಟ್ಟಿ, ಮಡಾಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಾಜಿ ತಾಲೂಕ್ ಪಂಚಾಯತ್ ಸದಸ್ಯ ಜೈದೇವ್ ಹೆಗ್ಡೆ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಯುವ ಮುಖಂಡ ವಸಂತ ಶೆÀಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಆವರ್ಸೆ ದಿವಾಕರ ಗಾಣಿಗ, ಹೆಂಗವಳ್ಳಿ ಚಂದ್ರಶೇಖರ ಶೆಟ್ಟಿ, ಅಮ್ಮಣ್ಣಿ ಮಡಾಮಕ್ಕಿ, ಸುಶೀಲ ಮಡಾಮಕ್ಕಿ, ಸುಜಾತ ಬೆಳ್ವೆ, ಪ್ರೇಮಾಬಾಯಿ ಬೆಳ್ವೆ,ಚಂದ್ರಿಕಾ ಬೆಳ್ವೆ, ಚಂದ್ರ ಆಚಾರ್ ಬೆಳ್ವೆ, ಕೃಷ್ಣ ನಾಯ್ಕ ಬೆಳ್ವೆ ಮುಂತಾದವರು ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here