Wednesday 24th, April 2024
canara news

ಉಪ್ಪಿನಂಗಡಿಯಲ್ಲಿ ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್

Published On : 18 Feb 2018   |  Reported By : canaranews network


ಮಂಗಳೂರು: ದಲಿತ ಯುವತಿಯ ಮೇಲೆ ಯುವಕರಿಬ್ಬರು ಅತ್ಯಾಚಾರ ನಡೆಸಿದ ಪೈಶಾಚಿಕ ಘಟನೆಯೊಂದು ದ.ಕ.ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಗುರುವಾರ ತಡ ರಾತ್ರಿ ಈ ಘಟನೆ ನಡೆದಿದ್ದು ದಲಿತ ಯುವತಿಯ ಮೇಲೆ ಕಾಮುಕರು ನೆಲ್ಯಾಡಿ ಎಂಬಲ್ಲಿ ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಹೇಳಲಾಗಿದೆ.ಗುರುವಾರ ರಾತ್ರಿ ಬೆಟ್ಟಂಪಾಡಿಯ ಯುವತಿಯೋರ್ವಳನ್ನು ಕರೆತಂದು ನೆಲ್ಯಾಡಿ ಬಳಿಯ ಖಾಲಿ ಮನೆಯೊಂದರಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಳಿಕ ತಡರಾತ್ರಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.ಘಟನೆಯ ಬಗ್ಗೆ ಸಂತ್ರಸ್ಥ ಯುವತಿ ಧನಂಜಯ ಹಾಗೂ ಇನ್ನೋರ್ವ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here